ಗದಗ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಸೌಜನ್ಯ ಪಾಲನಕರ ರಿಗೆ ಸನ್ಮಾನ
Gadag District Vishwakarma Employees Welfare Development Association felicitates caregivers
ಲೋಕದರ್ಶನ ವರದಿ
ಗದಗ 27:- 2025-26 ನೇ ಪ್ರಸಕ್ತ ಸಾಲಿನಲ್ಲಿ ಅತ್ಯುತ್ತಮ ಅಂಕ ಪಡೆದಂತಹ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಕಲಿಕಾ ಸಾಮಗ್ರಿ ವಿತರಣೆ ಸಮಾರಂಭವನ್ನು ಗದಗ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇದೇ ದಿನಾಂಕ 24 ರಂದು ನಗರದ ವಿಶ್ವಕರ್ಮ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಒಂದು ಅವಿಸ್ಮರಣೀಯ ವಿದ್ಯಾರ್ಥಿಗಳಿಗೆ ಸೈಕ್ಷಣಿಕವಾಗಿ ಪ್ರೋತ್ಸಾಹಪೂರ್ವಕ ಕಾರ್ಯಕ್ರಮದಲ್ಲಿ ಸನ್ 2025-26 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಕಳೆದ ಎಂಟು ವರ್ಷಗಳಿಂದ ನಿರಂತರವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಸಂಘವು ಪ್ರಸಕ್ತ ಸಾಲಿನಲ್ಲಿ ಶ್ರೀ ಸಿ ಡಿ ಓ ಜೈನ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿನಿಯಾದ ಕುಮಾರಿ ಸೌಜನ್ಯ ರಾಘವೇಂದ್ರ ಪಾಲನಕರ ಹಾಗೂ ಗಜೇಂದ್ರಗಡದ ಜಿ ಜಿ ಗರ್ಲ್ಸ್ ಹೈಸ್ಕೂಲ್ ನ ಸಂಜನಾ ನಾಗಲಿಂಗಪ್ಪಕಂಚಗಾರ ಹಾಗೂ ಇನ್ನಿತರಿಗೆ ಈ ಒಂದು ಬ್ರಹತ್ ಕಾರ್ಯಕ್ರಮದಲ್ಲಿ ಕಲಿಕಾ ಸಾಮಗ್ರಿ ವಿತರಿಸಿ, ಪಾರಿತೋಷಕ ಹಾಗೂ ಪ್ರಮಾಣ ಪತ್ರ ನೀಡುವ ಮೂಲಕ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂಧರ್ಭದಲ್ಲಿ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶಿರೋಳದ ಜಗದ್ಗುರು ಶ್ರೀ ಯಚ್ಚರಸ್ವಾಮಿಗಳ ಸಂಸ್ಥಾನ ಗವಿಮಠದ ಪರಮಪೂಜ್ಯ ಶ್ರೀ ಅಭಿನವ ಯಚ್ಚರಮಹಾಸ್ವಾಮಿಗಳು, ಗದಗ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ) ಅಧ್ಯಕ್ಷರಾದ ರಾಜಗೋಪಾಲ ಡಿ. ಕಡ್ಲಿಕೊಪ್ಪ ರವರ ಅಧ್ಯಕ್ಷತೆಯಲ್ಲಿ ಮುಖ್ಯ ಅತಿಥಿಗಳಾಗಿ ಗದಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರಾದ ಕೆ. ಡಿ. ಬಡಿಗೇರ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾ ಸಭಾ (ರಿ) ಧಾರವಾಡದ ಅಧ್ಯಕ್ಷರಾದ ಕಾಳಪ್ಪ ವಿ. ಬಡಿಗೇರ, ರಾಯಚೂರ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ) ಜಿಲ್ಲಾಧ್ಯಕ್ಷರಾದ ಡಾ. ಮನೋಹರ ವಾಯ್. ಪತ್ತಾರ, ಧಾರವಾಡ ಜಿಲ್ಲಾ ವಿಶ್ವಕರ್ಮ ನೌಕರರ ಹಾಗೂ ನಿವೃತ್ತ ನೌಕರರ ಸಂಘ (ರಿ)ಅಧ್ಯಕ್ಷರಾದ ವಿಠಲ ಜಿ. ಕಮ್ಮಾರ, ಹಾವೇರಿ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ) ಅಧ್ಯಕ್ಷರಾದ ಈರ್ಪ ಶ. ಪಂಚಾನನ, ಬಾಗಲಕೋಟಿ ತಾಲೂಕ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ) ಅಧ್ಯಕ್ಷರಾದ ದೇವೇಂದ್ರ್ಪ ಮ. ಅಗಲತಕಟ್ಟಿ, ರಾಯಚೂರ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ) ಪ್ರಧಾನ ಕಾರ್ಯದರ್ಶಿಗಳಾದ ಕೆ. ರಾಮು ಗಾಣದಾಳ, ಕೊಪ್ಪಳ ತಾಲೂಕ ವಿಶ್ವಕರ್ಮ ಸಮಾಜ (ರಿ) ಅಧ್ಯಕ್ಷರಾದ ದೇವೇಂದ್ರ್ಪ ಎಚ್. ಬಡಿಗೇರ, ಕೊಪ್ಪಳ ಜಿಲ್ಲಾ ವಿಶ್ವಕರ್ಮ ನೌಕರರ ನಿರ್ದೇಶಕರು ಹಾಗೂ ಜಿಲ್ಲಾ ವಿಶ್ವಕರ್ಮ ಸಮಾಜ ಕಾರ್ಯಾಧ್ಯಕ್ಷರಾದ ರುದ್ರ್ಪ ಕೆ. ಬಡಿಗೇರ, ಯಾದಗಿರಿ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಮೌನೇಶ ಕೆಂಭಾವಿ ಹಾಗೂ ಸಮಸ್ತ ವಿಶ್ವಕರ್ಮ ಸಮಾಜ ಭಾಂಧವರು ಉಪಸ್ಥಿತರಿದ್ದರು.
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 