ಗದಗ : ಹುಬ್ಬಳ್ಳಿ ಧಾರವಾಡ ಬಿ.ಆರ್.ಟಿ.ಎಸ್. ಕಂಪನಿಯ ವ್ಯವಸ್ಥಾಪಕ ನಿದರ್ೇಶಕರಾಗಿದ್ದ ಆಯ್ .ಎ. ಎಸ್ ಅಧಿಕಾರಿ ಎಂ.ಜಿ.ಹಿರೇಮಠ ಅವರು ಮಂಗಳವಾರದಂದು ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು. ವಗರ್ಾವಣೆಗೊಂಡ ಜಿಲ್ಲಾಧಿಕಾರಿ ಮನೋಜ್ ಜೈನ್, ಗದಗ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಹೂಗುಚ್ಛ ನೀಡಿ ಶುಭ ಕೋರಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ರುದ್ರೇಶ ಎಸ್.ಎನ್. ಹಾಗೂ ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ಮನ್ಸೂರ ಅಲಿ ಉಪಸ್ಥಿತರಿದ್ದರು.