ವಿಜ್ಞಾನ ವಿಭಾಗದಲ್ಲಿ ಫಸ್ಟ್ ರಾ್ಯಂಕ್ ಪಡೆದ ಗದಗ ಸರಕಾರಿ ಪದವಿ ಪೂರ್ವ ಕಾಲೇಜು
Gadag Government Pre-Graduate College secures first rank in Science department
ಲೋಕದರ್ಶನ ವರದಿ
ಗದಗ 30: ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಮೃದ್ಧಿ ಸಿದ್ಲಿಂಗ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆಯುವ ಮೂಲಕ ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಸಮೃದ್ಧಿ ಸಿದ್ಲಿಂಗ ಅವರು ವಿಜ್ಞಾನ ವಿಭಾಗದಲ್ಲಿ 600ಕ್ಕೆ 595 ಅಂಕಗಳನ್ನು ಗಳಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ರಾಜ್ಯದ ಜನರಲ್ ರಾ್ಯಂಕಿಂಗ್ ನಲ್ಲಿ 5ನೇ ಸ್ಥಾನ, ಜಿಲ್ಲೆಗೆ ಫಸ್ಟ್ ರಾ್ಯಂಕ್, ಹಾಗೂ ರಾಜ್ಯದ ಸರಕಾರಿ ಕಾಲೇಜುಗಳ ವಿಜ್ಞಾನ ವಿಭಾಗದಲ್ಲಿ ಫಸ್ಟ್ ರಾ್ಯಂಕ್ ಪಡೆದು ಅತ್ಯುತ್ತಮ ಸಾಧನೆಗೈದಿದ್ದಾರೆ.
ಕಾಲೇಜು ಅಭಿವೃಧಿ ಸಮಿತಿಯ ಉಪಾಧ್ಯಕ್ಷರು ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸಿದ್ದಲಿಂಗೇಶ್ವರ ಎಚ್. ಪಾಟೀಲ ಅವರು ಮಾತನಾಡಿ ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಕೀರ್ತಿ ಸಮೃದ್ಧಿ ಸಿದ್ಲಿಂಗ ಅವರಿಗೆ ಸಲ್ಲುತ್ತದೆ. ಗದಗ ಸರಕಾರಿ ಪದವಿ ಪೂರ್ವ ಕಾಲೇಜು, ರಾಜ್ಯಕ್ಕೆ ಮಾದರಿಯಾಗಿದೆ ಎಂದು ಹರ್ಷವ್ಯಕ್ತಪಡಿಸಿದ್ದಾರೆ.
ಕಾನೂನು ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಕೆ. ಪಾಟೀಲ ಅವರು, ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಉನ್ನತ ಸಾಧನೆ ಸಾಧ್ಯ ಎಂದು ತೋರಿಸಿಕೊಟ್ಟ ಸಮೃದ್ಧಿ ಸಿದ್ಲಿಂಗ, ಅವರ ಪೋಷಕರಿಗೆ ಹಾಗೂ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಪದವಿ ಪೂರ್ವ ಕಾಲೇಜು ಗದಗನ ಎಲ್ಲಾ ಉಪನ್ಯಾಸಕರಿಗೆ, ಪ್ರಾಚಾರ್ಯರಿಗೆ, ಕಾಲೇಜು ಅಭಿವೃದ್ಧಿ ಸಮಿತಿಯ ಸರ್ವ ಸದಸ್ಯರಿಗೆ ಅಭಿನಂದಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 