ಗದಗ ಶಹರ ವಲಯದ ಶಾಲಾ ವಾಹನಗಳ ಚಾಲಕರ ಸಭೆ: ಸುರಕ್ಷಿತ ಸಂಚಾರಕ್ಕೆ ಕಟ್ಟುನಿಟ್ಟಿನ ಸೂಚನೆ
Gadag city zone school vehicle drivers' meeting: Strict instructions for safe traffic
ಗದಗ 25: ಶಾಲಾ ಮಕ್ಕಳ ಸುರಕ್ಷಿತ ಸಂಚಾರಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಗದಗ ಶಹರ ವಲಯದ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಶಾಲಾ ವಾಹನಗಳ ಚಾಲಕರು ಮತ್ತು ನಿರ್ವಾಹಕರ ಸಭೆಯನ್ನು ಬುಧವಾರ ಗದಗ ನಗರದ ಶಹರ ಸಂಪನ್ಮೂಲ ಕೇಂದ್ರದಲ್ಲಿ ನಡೆಸಲಾಯಿತು. ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿ ಅರುಣಕುಮಾರ ಕಟ್ಟಿಮನಿ ಮಾತನಾಡಿ, ಶಾಲಾ ವಾಹನಗಳ ಸುರಕ್ಷತೆ, ಸಂಚಾರ ನಿಯಮಗಳ ಪಾಲನೆ ಹಾಗೂ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಹಲವು ಮಹತ್ವದ ಸೂಚನೆಗಳನ್ನು ನೀಡಿದರು.ಶಾಲಾ ವಾಹನ ಚಾಲಕರು ಮತ್ತು ನಿರ್ವಾಹಕರು ವಾಹನಗಳನ್ನು ಅತ್ಯಂತ ಜಾಗರೂಕತೆಯಿಂದ ಚಾಲನೆ ಮಾಡಬೇಕು. ವಾಹನಗಳನ್ನು ಓವರ್ಟೇಕ್ ಮಾಡುವಾಗ ಅಥವಾ ಇತರ ವಾಹನಗಳನ್ನು ಹಿಂದಿಕ್ಕುವ ವೇಳೆ ಯಾವುದೇ ರೀತಿಯ ಅಜಾಗರೂಕತೆ ತೋರಬಾರದು ಎಂದು ಎಚ್ಚರಿಕೆ ನೀಡಿದರು.
ರಸ್ತೆಗಳಲ್ಲಿ ನಿಯಮಬದ್ಧವಾಗಿ ವಾಹನ ಚಲಾಯಿಸುವುದು, ಮಕ್ಕಳ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸುವುದು ಮತ್ತು ಶಾಲಾ ವಾಹನಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ತಿಳಿಸಿದರು.ಶಾಲಾ ವಾಹನಗಳಲ್ಲಿ ಮಕ್ಕಳನ್ನು ನಿಗದಿತ ಆಸನ ಸಾಮರ್ಥ್ಯಕ್ಕಿಂತ ಹೆಚ್ಚು ಸಂಖ್ಯೆಯಲ್ಲಿ ಕೂರಿಸಬಾರದು. ಶಾಲಾ ವಾಹನದ ವೇಗವನ್ನು ಗಂಟೆಗೆ 40 ಕಿ.ಮೀ. ಮಿತಿಯೊಳಗೆ ಇಟ್ಟುಕೊಳ್ಳಬೇಕು. ವಾಹನದ ಸೀಟುಗಳು, ಬಾಗಿಲುಗಳು ಹಾಗೂ ಲಾಕ್ ವ್ಯವಸ್ಥೆಗಳು ಸಮರ್ಕವಾಗಿ ಕಾರ್ಯನಿರ್ವಹಿಸುವಂತಿರಬೇಕು. ವಾಹನಗಳ ಫಿಟ್ನೆಸ್ ಪ್ರಮಾಣಪತ್ರ, ವಿಮೆ ಹಾಗೂ ಇತರೆ ದಾಖಲೆಗಳನ್ನು ನಿಯಮಿತವಾಗಿ ನವೀಕರಿಸಿಕೊಂಡಿರಬೇಕು ಎಂದು ಸೂಚಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 