ವೈಜ್ಞಾನಿಕ ತ್ಯಾಜ್ಯ ವಿಲೇವಾರಿಯಿಂದ ಗದಗ ನಿರ್ಮಾಣ
Gadag construction through scientific waste disposal
ಗದಗ 16 : ಅವಳಿ ನಗರದ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಸಮರ್ಕವಾಗಿ ನಿರ್ವಹಿಸುವ ಉದ್ದೇಶದಿಂದ ನಿರ್ಮಿಸಲಾಗುತ್ತಿರುವ ಘನ ತ್ಯಾಜ್ಯ ವಸ್ತು ನಿರ್ವಹಣಾ ಘಟಕದಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು ಕಾರ್ಯನಿರ್ವಹಣೆ ಹಾಗೂ ಹಸ್ತಾಂತರ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಭಾನುವಾರ ನಗರದ ಬಳಗಾನೂರು ರಸ್ತೆಯಲ್ಲಿರುವ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಚಾಲನೆ ನೀಡಿದರು.
ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶ ಗದಗ ಹಾಗೂ ನಗರಸಭೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ನಗರಗಳಲ್ಲಿ ಜನಸಂಖ್ಯೆ ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು. ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡುವುದರಿಂದ ಪರಿಸರ ಸಂರಕ್ಷಣೆಗೂ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವುದಕ್ಕೂ ಸಹಕಾರಿಯಾಗುತ್ತದೆ ಎಂದು ಅವಳಿ ನಗರಕ್ಕೆ ಇದು ಮೊದಲ ಸಮಗ್ರ ಘನ ತ್ಯಾಜ್ಯ ನಿರ್ವಹಣಾ ಯೋಜನೆಯಾಗಿದ್ದು, ಸ್ವಚ್ಛ ಹಾಗೂ ಪರಿಸರ ಸ್ನೇಹಿ ನಗರ ನಿರ್ಮಾಣಕ್ಕೆ ಇದು ಮಹತ್ವದ ಹೆಜ್ಜೆಯಾಗಲಿದೆ ಎಂದು ಹೇಳಿದರು.
ಈ ಯೋಜನೆಯಡಿ ಸರ್ಕಾರ ಮೂಲಸೌಕರ್ಯ ಒದಗಿಸುವುದರ ಜೊತೆಗೆ ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಘಟಕ ನಿರ್ಮಿಸಿ ನಿರ್ವಹಿಸುವ ವ್ಯವಸ್ಥೆ ಜಾರಿಯಲ್ಲಿದೆ. ನಗರಸಭೆಯ 25 ಎಕರೆ ಪ್ರದೇಶದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕದಲ್ಲಿ 5 ಎಕರೆ ಜಾಗವನ್ನು ಡಿಬಿಎಫ್ಓಟಿ ಆಧಾರಿತ ಹಭಾಗಿತ್ವದಲ್ಲಿ ಎನ್ವಿರೋಟೆಕ್ ಸೊಲ್ಯೂಷನ್ಸ್ ಸಂಸ್ಥೆಗೆ ಹಸ್ತಾಂತರಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.ಸುಮಾರು ?8.73 ಕೋಟಿ ವೆಚ್ಚದಲ್ಲಿ ಈ ಘಟಕವನ್ನು ಅಭಿವೃದ್ಧಿಪಡಿಸಲಾಗುತ್ತದೆ. ಘಟಕದಲ್ಲಿ ಮಿಶ್ರ ತ್ಯಾಜ್ಯದಿಂದ ಹಸಿ ತ್ಯಾಜ್ಯವನ್ನು ಬೇರಿ್ಡಸಿ ಜೈವಿಕ ಗೊಬ್ಬರವಾಗಿ ಪರಿವರ್ತಿಸಲಾಗುತ್ತದೆ.
ಒಣ ತ್ಯಾಜ್ಯವನ್ನು ಪುನರ್ ಬಳಕೆ ಮಾಡಲಾಗುತ್ತದೆ. ಪುನರ್ ಬಳಕೆ ಸಾಧ್ಯವಾಗದ ತ್ಯಾಜ್ಯವನ್ನು ಕೈಗಾರಿಕೆಗಳಿಗೆ ಇಂಧನ ರೂಪದಲ್ಲಿ ಶಕ್ತಿ ಉತ್ಪಾದನೆಗಾಗಿ ಕಳುಹಿಸಲಾಗುತ್ತದೆ ಎಂದು ತಿಳಿಸಿದರು.ನಗರದಲ್ಲಿ ಪ್ರತಿದಿನ ಸುಮಾರು 75 ಟನ್ ತ್ಯಾಜ್ಯ ಸಂಗ್ರಹವಾಗುತ್ತಿದ್ದು, ಅದರ ಸಮರ್ಕ ವಿಲೇವಾರಿ ಕಾರ್ಯ ನಡೆಯುತ್ತಿದೆ. ತ್ಯಾಜ್ಯ ನಿರ್ವಹಣೆಯಲ್ಲಿ ಗದಗ ಜಿಲ್ಲೆ ರಾಜ್ಯದಲ್ಲಿ ಆರನೇ ಸ್ಥಾನದಲ್ಲಿದೆ ಎಂದು ಹೇಳಿದರು. ಈ ಯೋಜನೆಯ ಕಾಮಗಾರಿಯನ್ನು ಆಗಸ್ಟ್ 15ರೊಳಗೆ ಪೂರ್ಣಗೊಳಿಸಿ ಉದ್ಘಾಟನೆ ಮಾಡುವ ಉದ್ದೇಶವಿದ್ದು, ಕಾಮಗಾರಿ ಗುಣಮಟ್ಟದಿಂದ ಪೂರ್ಣಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಪ್ರಭು ಬುರಬುರೆ, ಬಸವರಾಜ ಕಡೇಮನಿ, ನಗರಸಭೆ ಸದಸ್ಯರಾದ ಲಕ್ಷ್ಮೀ ಸಿದ್ದಮ್ಮನಹಳ್ಳಿ, ಶ್ರೀಮತಿ ಮುನಿಯಾರ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ್, ಪರಿಸರ ಅಧಿಕಾರಿ ಆನಂದ ಬದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 