ಜಲ ಸಂರಕ್ಷಣೆಯಲ್ಲಿ ಗದಗ ರಾಜ್ಯಕ್ಕೆ ಪ್ರಥಮ ದೇಶದಲ್ಲೇ 4ನೇ ಸ್ಥಾನಕ್ಕೆ ಏರಿದ ಗದಗ ಜಿಲ್ಲೆ 25 ಲಕ್ಷ ರೂ. ನಗದು ಬಹುಮಾನಕ್ಕೆ ಭಾಜನ

ಜಲ ಸಂರಕ್ಷಣೆಯಲ್ಲಿ ಗದಗ ರಾಜ್ಯಕ್ಕೆ ಪ್ರಥಮ ದೇಶದಲ್ಲೇ 4ನೇ ಸ್ಥಾನಕ್ಕೆ ಏರಿದ ಗದಗ ಜಿಲ್ಲೆ  25 ಲಕ್ಷ ರೂ. ನಗದು ಬಹುಮಾನಕ್ಕೆ ಭಾಜನ Gadag district, which rose to 4th position in the country in water conservation, was awarded a cash

              ಗದಗ  20:  ಜಲಶಕ್ತಿ ಅಭಿಯಾನದ ಮಹತ್ವದ ಭಾಗವಾಗಿರುವ ‘ಜಲಸಂಚಾಯಿ ಜನಭಾಗಿದಾರಿ 1.0’ ಕಾರ್ಯಕ್ರಮದಲ್ಲಿ ಗದಗ ಜಿಲ್ಲೆಯು ಐತಿಹಾಸಿಕ ಸಾಧನೆ ಮಾಡುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದೆ. ಜಲ ಸಂರಕ್ಷಣೆ ಕಾಮಗಾರಿಗಳ ಅನುಷ್ಠಾನದಲ್ಲಿ ಗದಗ ಜಿಲ್ಲೆಯು ಕರ್ನಾಟಕದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ದೇಶದ 780 ಜಿಲ್ಲೆಗಳಲ್ಲಿ (ಝೇನ್ 3, ಕೆಟಗರಿ 3 ರಲ್ಲಿ) ನಾಲ್ಕನೇ ಸ್ಥಾನ ಪಡೆಯುವ ಮೂಲಕ 25 ಲಕ್ಷ ರೂಪಾಯಿಗಳ ನಗದು ಬಹುಮಾನಕ್ಕೆ ಭಾಜನವಾಗಿದೆ.ನೀರಿಗಾಗಿ ಒಂದಾಗಿಪ್ರತಿ ಹನಿ ನೀರನ್ನು ಸಂರಕ್ಷಿಸಿ ಎಂಬ ಧ್ಯೇಯದೊಂದಿಗೆ ಜಲಸಂಚಾಯಿ ಜನಭಾಗಿದಾರಿ 1.0 ಅಭಿಯಾನವನ್ನು ಪ್ರಾರಂಭಿಸಲಾಗಿತ್ತು.

                ಮಳೆ ನೀರನ್ನು ಸಂಗ್ರಹಿಸುವುದು, ಜಲ ಸಂರಕ್ಷಣೆಯ ಸಂಸ್ಕೃತಿಯನ್ನು ಬೆಳೆಸುವುದು, ನೀರಿನ ಗುಣಮಟ್ಟವನ್ನು ಸುಧಾರಿಸುವುದು, ನೀರಿನ ಕೊರತೆಯ ಸವಾಲಿಗೆ ಸಮುದಾಯದ ಸಹಭಾಗಿತ್ವದೊಂದಿಗೆ ಸಮರ್ಥ ಪರಿಹಾರವನ್ನು ಒದಗಿಸುವುದು ಈ ಕಾರ್ಯಕ್ರಮದ ಮುಖ್ಯ ಗುರಿಯಾಗಿತ್ತು.11,971 ಕಾಮಗಾರಿಗಳ ಸಾಧನೆಈ ಹಿನ್ನೆಲೆಯಲ್ಲಿ 2024 ಏಪ್ರಿಲ್ 1ರಿಂದ 20205 ಮಾರ್ಚ್‌ 31ರ ವರೆಗಿನ ಅವಧಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಸೇರಿದಂತೆ ವಿವಿಧ ಯೋಜನೆಗಳಡಿ ಬೃಹತ್ ಜಲ ಕ್ರಾಂತಿಗೆ ನಾಂದಿ ಹಾಡಿದವು. ಈ ಅವಧಿಯಲ್ಲಿ ಒಟ್ಟು 11,971 ಜಲ ಸಂರಕ್ಷಣೆ ಕಾಮಗಾರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಜಲಸಂಚಾಯಿ ಪೋರ್ಟಲ್‌ನಲ್ಲಿ ದಾಖಲಿಸಲಾಯಿತು.ಮುಖ್ಯವಾಗಿ 11,329 ವೈಯಕ್ತಿಕ ಮತ್ತು ಸಮುದಾಯ ಬದು ನಿರ್ಮಾಣ ಮಾಡಲಾಯಿತು. 465 ಮಳೆ ನೀರು ಕೊಯ್ಲು ಕಾಮಗಾರಿಗಳು, 75 ಬೋರವೆಲ್ ರಿಚಾರ್ಜ್‌ ,  10 ಚೆಕ್ ಡ್ಯಾಂ ನಿರ್ಮಾಣದಿಂದ ಗದಗ ಜಿಲ್ಲೆಯ ಜಲ ಸಂರಕ್ಷಣೆಯ ಚಿತ್ರಣವೇ ಬದಲಾಗಿದೆ. ಕೇಂದ್ರ ತಂಡದಿಂದ ಮನ್ನಣೆಗದಗ ಜಿಲ್ಲಾ ಪಂಚಾಯಿತಿಯ ಈ ಶ್ರಮಕ್ಕೆ ಕೇಂದ್ರ ತಂಡದಿಂದಲೂ ಮನ್ನಣೆ ದೊರೆತಿದೆ. ಕೇಂದ್ರ ನೋಡಲ್ ಅಧಿಕಾರಿಗಳು 2025 ಜೂನ್ 16ರಿಂದ 21ರ ವರೆಗೆ ಸ್ಥಳ ಪರೀಶೀಲನೆ, ದಾಖಲೆಗಳ ಪರೀಶೀಲನೆ ನಡೆಸಿ, ಕಾಮಗಾರಿಗಳು ಉನ್ನತ ಮಾನದಂಡಗಳನ್ನು ಪೂರೈಸಿರುವುದು ಖಚಿತಪಡಿಸಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದು, 

                  ಪ್ರಶಸ್ತಿಗೆ ಕಾರಣವಾಗಿದೆ. ಕೋಟ್ ಜಲಸಂಚಾಯಿ ಜನಭಾಗಿದಾರಿ ಅಭಿಯಾನದಲ್ಲಿ ಕರ್ನಾಟಕದಲ್ಲೇ ಗದಗ ಜಿಲ್ಲೆಗೆ ಪ್ರಥಮ ಸ್ಥಾನ ಬಂದಿರುವುದು ಸಂತಸ ತಂದಿದೆ. ಅಂತರ್ಜಲ ಮಟ್ಟ ಹೆಚ್ಚಳ ಮತ್ತು ಪರಿಸರ ಸಂರಕ್ಷಣೆ ಕುರಿತು ಜಿಲ್ಲೆಯ ಅಧಿಕಾರಿಗಳು ಶ್ರಮವಹಿಸಿ ಹಲವು ಕಾಮಗಾರಿಗಳನ್ನು ಅನುಷ್ಟಾನ ಮಾಡಿರುವುದು ಪ್ರಶಂಸೆನೀಯ. ಪ್ರಥಮ ಸ್ಥಾನ ಬಂದಿರುವುದಕ್ಕೆ ಜಿಲ್ಲೆಗೆ ನಗದು ರೂಪದಲ್ಲಿ 25 ಲಕ್ಷ ಅನುದಾನ ನೀಡುತ್ತಿದ್ದಾರೆ. ಬರುವ ಅನುದಾನವನ್ನು ಅಭಿಯಾನದ ಉದ್ದೇಶ ಈಡೇರಿಕೆಗೆ ಬಳಸಿಕೊಳ್ಳಲು ಶ್ರಮಿಸಲಾಗುವುದು.ಶ್ರೀಧರ ಸಿ.ಎನ್‌., ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಒ, ಗದಗ.  ಕೋಟ್ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಹಲವು ಪರಿಸರ ಸ್ನೇಹಿ ಕಾಮಗಾರಿಗಳನ್ನು ಅನುಷ್ಟಾನ ಮಾಡಲಾಗಿದೆ. ಕೇಂದ್ರ ಅಧ್ಯಯನ ತಂಡ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಹೀಗಾಗಿ ಈ ಪ್ರಥಮ ಸ್ಥಾನ ದೊರೆತಿರುವುದು ನಮಗೆ ಮತ್ತಷ್ಟು ಕ್ರಿಯಾತ್ಮಕ ಕಾಮಗಾರಿಗಳನ್ನು ಅನುಷ್ಠಾನ ಮಾಡಲು ಪ್ರೋತ್ಸಾಹಕವಾಗಿದೆ.

                 ಸಿ.ಆರ್‌. ಮುಂಡರಗಿ, ಉಪಕಾರ್ಯದರ್ಶಿಗಳು, ಜಿಪಂ, ಗದಗ  ಕೋಟ್ ಜಿಲ್ಲೆಯ ಮೇಲಾಧಿಕಾರಿಗಳ ಮಾರ್ಗ ದರ್ಶನದಲ್ಲಿ 11971 ಕಾಮಗಾರಿಗಳ ಮಾಹಿತಿಯನ್ನು ಜಲಸಂಚಾಯಿ ಜನಭಾಗಿದಾರಿ 1.0 ಪೋರ್ಟಲ್ ನಲ್ಲಿ ಅಪಲೋಡ ಮಾಡಲಾಗಿದೆ. ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಅತೀ ಹೆಚ್ಚು ಕಾಮಗಾರಿಗಳನ್ನು ಜಿಲ್ಲೆಯಲ್ಲಿ ಅನುಷ್ಟಾನಿಸಿರುವುದರಿಂದಲೇ ಈ ಪ್ರಶಸ್ತಿ ಬಂದಿದೆ. ಇದಕ್ಕೆ ಪೂರಕವಾಗಿ ಇನ್ನಷ್ಟು ಕಾಮಗಾರಿಗಳನ್ನು ವೈಜ್ಞಾನಿಕವಾಗಿ  ಮನರೇಗಾ ಯೋಜನೆಯಡಿಯಲ್ಲಿ  ಕ್ರಿಯಾಯೋಜನೆ ನಿಯಮನುಸಾರ ತಯಾರಿಸಿ ಮತ್ತು ಅನುಮೋದನೆ ತೆಗೆದುಕೊಂಡು ಇನ್ನು ಹೆಚ್ಚಿನ ಕ್ರಿಯಾತ್ಮಕ ಕಾಮಗಾರಿಗಳನ್ನು ಅನುಷ್ಠಾನ ಮಾಡಲು ಮೇಲಾಧಿಕಾರಿಗಳ ಸೂಚನೆಯಂತೆ ಕ್ರಮವಹಿಸಿದ್ದು ಮತ್ತು ಸದರಿ ಅಭಿಯಾನಧಡಿ ಶ್ರಮಿಸಿದ ಮನರೇಗಾ ತಂಡಕ್ಕೆ ಅಭಿನಂದನೆಗಳು.ಕಿರಣಕುಮಾರ್ ಎಸ್‌.ಹೆಚ್‌.ಸಹಾಯಕ ಜಿಲ್ಲಾ ಕಾರ್ಯಕ್ರಮ ಸಮನ್ವಯ ಅಧಿಕಾರಿ , ಮನರೇಗಾ ವಿಭಾಗ ಜಿಲ್ಲಾ ಪಂಚಾಯತ್ ಗದಗ ನವದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಒ (ಪ್ರಭಾರ) ಶ್ರೀಧರ ಪ್ರಶಸ್ತಿ ಸ್ವೀಕರಿಸಿದರು.