ಸ್ಕೌಟ್ಸ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಗಜಾನನ ಮನ್ನಿಕೇರಿ ಆಯ್ಕೆ
Gajanana Mannikeri selected for Scouts national level award
ಬೆಳಗಾವಿ 25: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಉಪಾಧ್ಯಕ್ಷರು (ಸ್ಕೌಟ್ಸ್) ಹಾಗೂ ಬೆಳಗಾವಿ ಜಿಲ್ಲಾ ಮುಖ್ಯ ಆಯುಕ್ತರಾದ ಗಜಾನನ ಬಸಲಿಂಗಪ್ಪ ಮನ್ನಿಕೇರಿಯವರು ಸ್ಕೌಟ್ಸ್ ಸಂಸ್ಥೆಯಲ್ಲಿ ಸಕ್ರಿಯವಾಗಿ 40 ವರ್ಷಗಳಿಂದ ವಿವಿಧ ಹುದ್ದೆಗಳನ್ನು ಅಲಂಕರಿಸಿ ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾಮಟ್ಟದ ಕಾರ್ಯಕ್ರಮಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಷ್ಟ್ರ ಸಂಸ್ಥೆಯವರು ರಾಷ್ಟ್ರಮಟ್ಟದ "ಬಾರ್ ಟು ಸಿಲ್ವರ್ ಸ್ಟಾರ್" ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯುವ 75ನೇ ರಾಷ್ಟ್ರೀಯ ಜಾಂಬೂರಿಯಲ್ಲಿ ಬುಧವಾರ ದಿ. 26ರಂದು ಲಕ್ನೋದ ರಾಜ್ಯ ಭವನದಲ್ಲಿ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಈ ವೇಳೆ ಗಜಾನನ ಮನ್ನಿಕೇರಿ ಅವರನ್ನು ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂದ್ಯಾ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಭಿನಂದಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 