ಗಾಂಧಿ ಜಯಂತಿ : ಸೋನಿಯಾ, ರಾಹುಲ್ ಪಾದಯಾತ್ರೆ

ನವದೆಹಲಿ, ಸೆ 27 : ಮಹಾತ್ಮಾಗಾಂಧಿ ಅವರ 150 ನೇ ಜನ್ಮಶತಮಾನೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷ ಬರುವ ಅಕ್ಟೋಬರ್ 2 ರಿಂದ ಒಂದು ವಾರಗಳ ಕಾಲ ದೇಶದ ಉದ್ದಗಲಕ್ಕೂ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಪಕ್ಷದ ಸಂಘಟನಾ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಈ ವಿಷಯವನ್ನು ತಿಳಿಸಿದ್ದಾರೆ. ಅಕ್ಟೋಬರ್ 2 ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಾಯಕತ್ವದಲ್ಲಿ ಪ್ರಮುಖ ನಾಯಕರು ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ಸೋನಿಯಾ ಗಾಂಧಿ ಅವರು ದೆಹಲಿಯಲ್ಲಿ ಪಾದಯಾತ್ರೆ ನಡೆಸಿದರೆ ಅವರ ಪುತ್ರ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗುಜರಾತ್ ನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ನಡೆಯಲಿರುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಅವರೊಂದಿಗೆ ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ಹಾಗೂ ಇತರೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.