ಶಾಂತಿ, ಸೌಹಾರ್ದತೆಯಿಂದ ಗಣೇಶ ಹಬ್ಬ ಆಚರಿಸಬೇಕು: ಪಿಎಸ್‌ಐ ಬಿ.ಆನಂದ
Ganesh festival should be celebrated with peace and harmony: PSI B. Ananda
ಬೆಟಗೇರಿ, 16 ; ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರ್ವ ಧರ್ಮಿಯರು ಸೌಹಾರ್ದತೆಯಿಂದ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಆಚರಿಸಬೇಕು ಎಂದು ಕುಲಗೋಡ ಪೊಲೀಸ್ ಠಾಣೆಯ ಪಿಎಸ್‌ಐ ಬಿ. ಆನಂದ ಹೇಳಿದರು.
ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ, ಮೂಡಲಗಿ ಪೊಲೀಸ್ ಠಾಣೆ ಸಿಪಿಐ ವೃತ್ತ ಕಛೇರಿ ಹಾಗೂ ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಆ.15ರಂದು ನಡೆದ ಶಾಂತಿಪಾಲನಾ ಸಭೆಯಲ್ಲಿ ಮಾತನಾಡಿ, ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಒಂದೇ ತಿಂಗಳಲ್ಲಿ ಬಂದಿರುವದರಿಂದ ಗಣೇಶ ಹಬ್ಬ ಹಾಗೂ ಈದ್ ಮಿಲಾದ್‌ನ್ನು ಅಹಿತಕರ ಘಟನೆ ನಡೆಯದಂತೆ ಶಾಂತತೆಯಿಂದ ಆಚರಿಸಬೇಕು ಎಂದರು.
ಸ್ಥಳೀಯರಿಗೆ ಸಲಹೆ:ಬೆಟಗೇರಿ ಗ್ರಾಮದ ಸ್ಥಳೀಯರು ದುಂದು ವೆಚ್ಚ ಮಾಡಿ ಗಣೇಶ ಹಬ್ಬ ಆಚರಿಸುವ ಬದಲು ಸಂಕಷ್ಟದಲ್ಲಿರುವ ಬಡವರಿಗೆ, ಅನಾಥಾಶ್ರಮದ ಮಕ್ಕಳಿಗೆ ಸಹಾಯ ಮಾಡಲು ಮುಂದಾಗಬೇಕು. ಗಣೇಶ ವಿಸರ್ಜನೆಯ ಸಮಯದಲ್ಲಿ ಡಾಲ್ಬಿ ಸೌಂಡ ಸಿಸ್ಟಮ್ ಬಳಸುವುದು ಸಂಪೂರ್ಣ ನಿಷೇದಿಸಲಾಗಿದೆ. ಸಾಮಾನ್ಯ ಧ್ವನಿವರ್ದಕ ಬಳಕೆಗೆ ಅವಕಾಶವಿದ್ದು, ಹೆಸ್ಕಾಂ ಮತ್ತು ಅಗ್ನಿಶ್ಯಾಮಕ ಹಾಗೂ ಪೊಲೀಸ್ ಠಾಣೆಯಿಂದ ಸಾಮಾನ್ಯ ಧ್ವನಿವರ್ದಕ ಬಳಕೆಗೆ ಅನುಮತಿ ಪಡೆಯಬೇಕು. ಅಶ್ಲೀಲ, ಕೋಮು ಗಲಭೆ ಪ್ರಚೋದಿಸುವ ಹಾಡು, ಸಂಭಾಷಣೆಗಳನ್ನು ಬಿತ್ತರಿಸಬಾರದು ಎಂದು ಪಿಎಸ್‌ಐ ಬಿ. ಆನಂದ ಸ್ಥಳೀಯರಿಗೆ ಸಲಹೆಗಳನ್ನು ತಿಳಿಸಿದರು.
ಸ್ಥಳೀಯ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ, ತಾಪಂ ಮಾಜಿ ಸದಸ್ಯ ಲಕ್ಷ್ಮಣ ನೀಲಣ್ಣವರ, ಲಖನ್ ಚಂದರಗಿ, ಶಂಕರ ಕೋಣಿ, ಮಾರುತಿ ಚಂದರಗಿ, ಪ್ರಕಾಶ ಹಾಲಣ್ಣವರ, ಗೀರೀಶ ಗಾಣಗಿ, ಈರಣ್ಣ ದೇಯಣ್ಣವರ, ಈರ್ಪ ಕಂಬಾರ, ಬಸವರಾಜ ದೇಯಣ್ಣವರ, ಸಂತೋಷ ಬಡಿಗೇರ, ರವಿ ದಾನವ್ವಗೋಳ, ಚಿದಾನಂದ ತಳವಾರ, ಅಶೋಕ ಹರಿಜನ, ಸುರೇಶ ತಳವಾರ, ಮುಖ್ಯಪೊಲೀಸ್ ಪೇದೆ ಎ.ಡಿ.ಹಡಗಿನಾಳ, ಮಾಳು ಆಡಿನ, ಸ್ಥಳೀಯ ವಿವಿಧ ಸಮಾಜದ ಮುಖಂಡರು, ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಯುವಕರು, ಸ್ಥಳೀಯರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 