ಥಾಣೆ, ಸೆ 13 ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ವೇಳೆ 15 ವರ್ಷದ ಬಾಲಕ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಸಂಜೆ ಕಲ್ಪೇಶ್ ಜಾಧವ್ ಎಂಬ ಒಂಭತ್ತನೇ ತರಗತಿ ವಿದ್ಯಾರ್ಥಿ ಗಣೇಶ ವಿಸರ್ಜನೆಗೆ ನದಿ ಬಳಿ ತೆರಳಿದ್ದಾಗ ಕಾಲು ಜಾರಿ ಬಿದ್ದು ಈ ದುರ್ಘಟನೆ ನಡೆದಿದೆ. ನದಿಯಿಂದ ಮೃತದೇಹ ಹೊರತೆಗೆಯಲಾಗಿದ್ದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೃತಕ ಕೆರೆಗಳು ಸೇರಿದಂತೆ ಜಿಲ್ಲೆಯ ವಿವಿಧ ಜಲಮೂಲಗಳಲ್ಲಿ ಒಟ್ಟು 6190 ಗಣೇಶ ಮೂರ್ತಿಗಳನ್ನು ವಿಸರ್ಜ್ಸಲಾಗಿದೆ ಎಂದು ನಗರ ಪಾಲಿಕೆ ಮಾಹಿತಿ ನೀಡಿದೆ.