ಗಣೇಶೋತ್ಸವ: ಮಹಾಲಿಂಗಪುರದಲ್ಲಿ ಪೊಲೀಸ್ ಪಥಸಂಚಲನ
Ganeshotsava: Police route march in Mahalingapura
ಲೋಕದರ್ಶನ ವರದಿ
ಮಹಾಲಿಂಗಪುರ 16: ಗಣೇಶೋತ್ಸವದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಮಹಾಲಿಂಗಪುರ ನಗರ ಪೊಲೀಸ್ ಠಾಣೆ ಪಿಎಸ್ಐ ಪ್ರೀತಮ್ ನಾಯಕ್ ನೇತೃತ್ವದಲ್ಲಿ ಬುಧವಾರ ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಹಾಗೂ ಹೋಂ ಗಾರ್ಡ್ ಸಿಬ್ಬಂದಿಯಿಂದ ಪಥಸಂಚಲನ ನಡೆಯಿತು.
ನಗರದ ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ಗಣೇಶ ಮೂರ್ತಿಗಳ ಪ್ರತಿಷ್ಠಾಪನಾ ಸ್ಥಳಗಳ ಸುತ್ತಮುತ್ತ ಪೊಲೀಸ್ ಸಿಬ್ಬಂದಿ ಪಥಸಂಚಲನ ನಡೆಸಿ ಸಾರ್ವಜನಿಕರಲ್ಲಿ ಸುರಕ್ಷತೆಯ ಭರವಸೆ ಮೂಡಿಸಿದರು. ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸುವಂತೆ ಸಾರ್ವಜನಿಕರಿಗೆ ಪೊಲೀಸರು ಮನವಿ ಮಾಡಿದರು.
ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದರು.
ಗಣೇಶೋತ್ಸವದ ದಿನಗಳಲ್ಲಿ ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸುವಂತೆ ಹಾಗೂ ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 