ಮರುಮೌಲ್ಯ ಮಾಪನದಲ್ಲಿ ಗಂಗಾ ಕೋಳೂರ ರಾಜ್ಯಕ್ಕೆ ಪ್ರಥಮ

ಮರುಮೌಲ್ಯ ಮಾಪನದಲ್ಲಿ ಗಂಗಾ ಕೋಳೂರ ರಾಜ್ಯಕ್ಕೆ ಪ್ರಥಮ Ganga Kolur ranks first in the state in revaluation

ತಾಳಿಕೋಟಿ 16 : ಮೈಲೇಶ್ವರದ ಪ್ರತಿಷ್ಠಿತ ಮಾರುತಿ ಶಿಕ್ಷಣ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಾ ಅಶೋಕ ಕೋಳೂರ ಪರೀಕ್ಷೆ-1ರ ಮರು ಮೌಲ್ಯ ಮಾಪನದಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. 2025-26 ನೇ ಸಾಲಿನಲ್ಲಿ ನಡೆದ ಎಸ್‌ಎಸ್ ಎಲ್‌ಸಿ ಪರೀಕ್ಷೆಯಲ್ಲಿ ಕುಮಾರಿ ಗಂಗಾ ಅಶೋಕ ಕೋಳೂರ 625ಕ್ಕೆ 623 ಅಂಕಗಳನ್ನು ಪಡೆದು ರಾಜ್ಯಕ್ಕೆ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಳು.  

ಪ್ರತಿಭಾವಂತ ವಿದ್ಯಾರ್ಥಿನಿಯಾದ ಗಂಗಾ ಕೋಳೂರ ಹಾಗೂ ಸಂಸ್ಥೆಯ ಮುಖ್ಯಸ್ಥರು ಈ ಫಲಿತಾಂಶದಿಂದ ಸಂತುಷ್ಟರಾಗಿರಲಿಲ್ಲ ಅವಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಳ್ಳುತ್ತಾಳೆ ಎಂಬ ಆತ್ಮವಿಶ್ವಾಸ ಅವರಲ್ಲಿತ್ತು ಈ ಕಾರಣದಿಂದ ಮರು ಮೌಲ್ಯಮಾಪನ ಮಾಡಿಸುವುದಾಗಿ ತೀರ್ಮಾನವನ್ನು ತೆಗೆದುಕೊಂಡರು.  ಅದರಂತೆ ಇದೀಗ ಮರು ಮೌಲ್ಯಮಾಪನದಲ್ಲಿ ಈ ವಿದ್ಯಾರ್ಥಿನಿಗೆ 625ಕ್ಕೆ 625 ಅಂಕಗಳು ಬಂದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಅಭಿನಂದನೆ: ವಿದ್ಯಾರ್ಥಿನಿ ಗಂಗಾ ಅಶೋಕ ಕೋಳೂರ ಅವರ ಈ ಅಭೂತಪೂರ್ವ ಸಾಧನೆಗೆ ಮಾರುತಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಬ್ರಿಲಿಯಂಟ್ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದೆ.