ಮರುಮೌಲ್ಯ ಮಾಪನದಲ್ಲಿ ಗಂಗಾ ಕೋಳೂರ ರಾಜ್ಯಕ್ಕೆ ಪ್ರಥಮ
Ganga Kolur ranks first in the state in revaluation
ತಾಳಿಕೋಟಿ 16 : ಮೈಲೇಶ್ವರದ ಪ್ರತಿಷ್ಠಿತ ಮಾರುತಿ ಶಿಕ್ಷಣ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಾ ಅಶೋಕ ಕೋಳೂರ ಪರೀಕ್ಷೆ-1ರ ಮರು ಮೌಲ್ಯ ಮಾಪನದಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. 2025-26 ನೇ ಸಾಲಿನಲ್ಲಿ ನಡೆದ ಎಸ್ಎಸ್ ಎಲ್ಸಿ ಪರೀಕ್ಷೆಯಲ್ಲಿ ಕುಮಾರಿ ಗಂಗಾ ಅಶೋಕ ಕೋಳೂರ 625ಕ್ಕೆ 623 ಅಂಕಗಳನ್ನು ಪಡೆದು ರಾಜ್ಯಕ್ಕೆ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಳು.
ಪ್ರತಿಭಾವಂತ ವಿದ್ಯಾರ್ಥಿನಿಯಾದ ಗಂಗಾ ಕೋಳೂರ ಹಾಗೂ ಸಂಸ್ಥೆಯ ಮುಖ್ಯಸ್ಥರು ಈ ಫಲಿತಾಂಶದಿಂದ ಸಂತುಷ್ಟರಾಗಿರಲಿಲ್ಲ ಅವಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಳ್ಳುತ್ತಾಳೆ ಎಂಬ ಆತ್ಮವಿಶ್ವಾಸ ಅವರಲ್ಲಿತ್ತು ಈ ಕಾರಣದಿಂದ ಮರು ಮೌಲ್ಯಮಾಪನ ಮಾಡಿಸುವುದಾಗಿ ತೀರ್ಮಾನವನ್ನು ತೆಗೆದುಕೊಂಡರು. ಅದರಂತೆ ಇದೀಗ ಮರು ಮೌಲ್ಯಮಾಪನದಲ್ಲಿ ಈ ವಿದ್ಯಾರ್ಥಿನಿಗೆ 625ಕ್ಕೆ 625 ಅಂಕಗಳು ಬಂದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಅಭಿನಂದನೆ: ವಿದ್ಯಾರ್ಥಿನಿ ಗಂಗಾ ಅಶೋಕ ಕೋಳೂರ ಅವರ ಈ ಅಭೂತಪೂರ್ವ ಸಾಧನೆಗೆ ಮಾರುತಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಬ್ರಿಲಿಯಂಟ್ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 