ಸುವರ್ಣಸೌಧ ಬೆಳಗಾವಿ: 17: ಗಂಗಾ ಕಲ್ಯಾಣ ಯೋಜನೆಯ ಅನುಷ್ಠಾನದಲ್ಲಿ ಲೋಪವೆಸಗಿರುವ ಅಧಿಕಾರಿಗಳ ವಿರುದ್ಧ ನಿದರ್ಾಕ್ಷಿಣ್ಯ ಕ್ರಮ ಜರುಗಿಸಿ ಇಲಾಖೆಯ ವಿಶ್ವಾಸಾರ್ಹತೆ ಹೆಚ್ಚಿಸಲಾಗುವುದು. ಇಲಾಖೆಯ ಹಿರಿಯ ಸಲಹೆಗಾರರಾಗಿರುವ ನಿವೃತ್ತ ಅಪರ ಮುಖ್ಯ ಕಾರ್ಯದಶರ್ಿಗಳ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಮಿತಿಯು ಈ ಕುರಿತು ವಿಚಾರಣೆ ನಡೆಸುತ್ತಿದೆ. ರಾಜ್ಯ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮಿತಿಯು ಕೂಡಾ ಯೋಜನೆ ಅನುಷ್ಠಾನದ ಬಗ್ಗೆ ವಿಶೇಷ ಒತ್ತು ನೀಡಿ ಕೂಲಂಕಷ ವಿಚಾರಣೆ ಮಾಡಬಹುದು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖಗರ್ೆ ಅವರು ವಿಧಾನ ಪರಿಷತ್ನಲ್ಲಿ ಇಂದು ಹೇಳಿದರು.
ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಂ. ಕೆ. ಪ್ರಾಣೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗಂಗಾ ಕಲ್ಯಾಣ ಯೋಜನೆ ಅನುಷ್ಠಾನದಲ್ಲಿ ದೂರುಗಳು ಬಂದಿದ್ದವು. ಈ ಪ್ರಕರಣಗಳಲ್ಲಿ ಇಲಾಖಾ ವಿಚಾರಣೆ ನಡೆಸಿ ಮೂವರು ಅಧಿಕಾರಿಗಳ ಎರಡು ವಾಷರ್ಿಕ ವೇತನ ಬಡ್ತಿಗಳನ್ನು ತಡೆಹಿಡಿಯಲಾಗಿದೆ. ಒಬ್ಬರನ್ನು ಅಮಾನತ್ತು ಮಾಡಲಾಗಿದೆ. ಒಬ್ಬರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಇಬ್ಬರು ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಯುತ್ತಿದೆ. ಯಾವುದಾದರೂ ನಿಧರ್ಿಷ್ಟ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲು ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು. ಪಾರದರ್ಶಕವಾಗಿ ದರ ನಿಗದಿಗೊಳಿಸಲಾಗುವುದು ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.
ಸಚಿವರ ಉತ್ತರದಿಂದ ಸಮಾಧಾನಗೊಳ್ಳದ ಪ್ರತಿಪಕ್ಷದ ಸದಸ್ಯರು ಈ ಕುರಿತು ವಿಚಾರಣೆ ನಡೆಸಲು ಜಂಟಿ ಸದನ ಸಮಿತಿ ರಚಿಸಬೇಕು. ಇಲ್ಲವೇ ಅರ್ಧ ಗಂಟೆ ಚಚರ್ೆಗೆ ಅವಕಾಶ ಕಲ್ಪಿಸಬೇಕು ಎಂದು ಪಟ್ಟು ಹಿಡಿದು ಸದನದ ಬಾವಿಗಿಳಿದು ಧರಣಿ ಆರಂಭಿಸಿದರು. ಸದನದಲ್ಲಿ ಗದ್ದಲ ವಾತಾವರಣ ನಿಮರ್ಾಣವಾದ್ದರಿಂದ ಸಭಾಪತಿ ಕೆ. ಪ್ರತಾಪ್ಚಂದ್ರ ಶೆಟ್ಟಿಯವರು ಸದನವನ್ನು ಅರ್ಧಗಂಟೆ ಕಾಲ ಮುಂದೂಡಿದರು.
ಸದನ ಮರುಸಮಾವೇಶಗೊಂಡ ಬಳಿಕ ಪ್ರತಿಪಕ್ಷದ ಸದಸ್ಯರು ಧರಣಿ ಮುಂದುವರೆಸಿದರು. ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖಗರ್ೆ ಅವರು ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರ ಸಲಹೆಯಂತೆ ಈ ವಿಷಯಕ್ಕಾಗಿ ಪ್ರತ್ಯೇಕ ಅರ್ಧಗಂಟೆ ಚಚರ್ೆಗೆ ಅವಕಾಶ ಕಲ್ಪಿಸಬಹುದು ಎಂದು ಸಭಾಪತಿಯವರಲ್ಲಿ ಮನವಿ ಮಾಡಿದರು.
ಸಭಾಪತಿ ಕೆ. ಪ್ರತಾಪ್ಚಂದ್ರ ಶೆಟ್ಟಿ ಅವರು ಗಂಗಾ ಕಲ್ಯಾಣ ಯೋಜನೆಯ ಅನುಷ್ಠಾನ ಕುರಿತು ಚಚರ್ೆಗೆ ಪ್ರತ್ಯೇಕ ಅರ್ಧ ಗಂಟೆ ಸಮಯಾವಕಾಶ ಕಲ್ಪಿಸುವುದಾಗಿ ಪ್ರಕಟಿಸಿದರು. ಆಗ ಪ್ರತಿಪಕ್ಷದ ಸದಸ್ಯರು ಧರಣಿ ಮೊಟಕುಗೊಳಿಸಿ ಮತ್ತೆ ಕಲಾಪದಲ್ಲಿ ಪಾಲ್ಗೊಂಡರು.
ಪರಿಶಿಷ್ಟ ಪಂಗಡಕ್ಕೆ ಕುಣಬಿ ಜನಾಂಗ, ಮೂರು ತಿಂಗಳೊಳಗೆ ಕೇಂದ್ರಕ್ಕೆ ಹೆಚ್ಚುವರಿ ಮಾಹಿತಿ :
ಉತ್ತರ ಕನ್ನಡ ಜಿಲ್ಲೆಯ ದಟ್ಟ ಕಾಡುಗಳಲ್ಲಿ ವಾಸಿಸುವ ಕುಣಬಿ ಜನಾಂಗವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು 2017 ರಲ್ಲಿ ಭಾರತ ಸಕರ್ಾರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಆದರೆ, ಕೇಂದ್ರ ಗೃಹ ಮಂತ್ರಾಲಯವು ರಾಜ್ಯ ಸಕರ್ಾರದ ಈ ಪ್ರಸ್ತಾವನೆಗೆ ಬೆಂಬಲ ನೀಡಿರುವುದಿಲ್ಲ. ಭಾರತದ ಮಹಾ ವಿಲೇಖನಾಧಿಕಾರಿ ( ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ) ಅವರ ಪರಿಶೀಲನಾ ಅಂಶಗಳ ಬಗ್ಗೆ ಮೂರು ತಿಂಗಳೊಳಗೆ ಕೇಂದ್ರ ಸಕರ್ಾರಕ್ಕೆ ಹೆಚ್ಚುವರಿ ಮಾಹಿತಿ ಒದಗಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖಗರ್ೆ ಅವರು ಮೇಲ್ಮನೆಯಲ್ಲಿ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಶ್ರೀಕಾಂತ ಘೋಟ್ನೆಕರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭಾರತ ಸಂವಿಧಾನದ ಅನುಚ್ಛೇದ 342 (1) ಪ್ರಕಾರ ಯಾವುದೇ ಜಾತಿಯನ್ನು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರ್ಪಡೆ ಮಾಡಲು, ತೆಗೆದುಹಾಕಲು ಅಥವಾ ಮಾಪರ್ಾಟು ಮಾಡಲು ಭಾರತ ಸಕರ್ಾರ ಸಕ್ಷಮ ಪ್ರಾಧಿಕಾರವಾಗಿರುತ್ತದೆ. ಕುಣಬಿ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನವನ್ನು ನಡೆಸಿ ಈ ಸಮುದಾಯವನ್ನು ರಾಜ್ಯದ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ದಿನಾಂಕ : 10-10-2017 ರಂದು ಶಿಫಾರಸ್ಸು ಮಾಡಲಾಗಿತ್ತು.
ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯವು ಇದಕ್ಕೆ ಬೆಂಬಲ ನೀಡದ ಕಾರಣ ಮೂರು ತಿಂಗಳ ಅವಧಿಯಲ್ಲಿ ಮೈಸೂರಿನ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಮೂಲಕ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಅವರ ಪರಿಶೀಲನೆಯ ಅಂಶಗಳ ಸೂಕ್ತ ಸಮರ್ಥನೆ ಮತ್ತು ಹೆಚ್ಚುವರಿ ವಿವರಗಳನ್ನು ಪಡೆದು ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಸಚಿವರು ತಿಳಿಸಿದರು.