ಮಾರೇಮ್ಮ ಹಾಗೂ ಹುಲಿಗೆಮ್ಮ ದೇವಿಯ ಗಂಗಾಸ್ಥಳ ಮೆರವಣಿಗೆ
Gangasthala procession of Goddesses Maremma and Huligemma
ಲೋಕದರ್ಶನ ವರದಿ
ಕಂಪ್ಲಿ 18: ಪಟ್ಟಣದ 2/11ನೇ ವಾರ್ಡ್ನ ಕುಂಬಾರ್ ಓಣಿಯ ಆರಾಧ್ಯ ದೇವತೆಗಳಾದ ಶ್ರೀ ಮಾರೇಮ್ಮ ಹಾಗೂ ಹುಲಿಗೆಮ್ಮ ದೇವಿಯ ಗಂಗಾಸ್ಥಳ, ಪೂಜಾ ಮಹೋತ್ಸವ ಹಾಗೂ ಉತ್ಸವ ಮೆರವಣಿಗೆ ಮಂಗಳವಾರ ಸಂಭ್ರಮದಿಂದ ನಡೆಯಿತು.
ತುಂಗಭದ್ರಾ ನದಿ ದಂಡೆಯಲ್ಲಿ ಗಂಗಾಪೂಜೆ ಸಲ್ಲಿಸಿದ ಬಳಿಕ ಆರಂಭವಾದ ಮೆರವಣಿಗೆಯಲ್ಲಿ ಕುಂಭ, ಸುಮಂಗಲಿಯರ ಕಳಸ, ಡೊಳ್ಳು ಕುಣಿತ, ನಂದಿಕೋಲು, ಭಜನೆ, ಕೋಲಾಟ, ಚಂಡೆ, ಹುಲಿ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಗಮನ ಸೆಳೆದವು.
ರಸ್ತೆಯುದ್ದಕ್ಕೂ ನೆರೆದಿದ್ದ ಭಕ್ತರು ಕಲಾ ತಂಡಗಳ ಪ್ರದರ್ಶನವನ್ನು ವೀಕ್ಷಿಸಿ ಸಂಭ್ರಮಿಸಿದರು. ಸ್ಥಳೀಯರು ಸೇರಿದಂತೆ ತಾಲೂಕು ಹಾಗೂ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 