ಗಂಗಾವತಿ: 79ನೇ ಸ್ವಾತಂತ್ರ್ಯ ದಿನಾಚರಣೆ
Gangavati: 79th Independence Day Celebration
ಗಂಗಾವತಿ 17 : ತಾಲ್ಲೂಕಿನ ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ “79ನೇ ಸ್ವಾತಂತ್ರ್ಯ ದಿನಾಚರಣೆ”ಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಾರೆ್ಪಣಯನ್ನು ಮಾಡಿ, ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ನೆಕ್ಕಂಟಿ ಸೂರಿಬಾಬು ಅವರು ಸ್ವಾತಂತ್ರ್ಯಕ್ಕಾಗಿ ಪ್ರಾಣ ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಬೇಕು. ಆ ಮೂಲಕ ಭಾರತದ ಭವ್ಯ ಇತಿಹಾಸ ಮತ್ತು ಅದರ ಮಹತ್ವವನ್ನು ತಿಳಿಯಬೇಕು. ವಿದ್ಯಾರ್ಥಿಗಳು ಉನ್ನತ ಮಟ್ಟದ ಸಾಧನೆಯನ್ನು ಮಾಡಲು ಶಿಸ್ತನ್ನು ರೂಢಿಸಿಕೊಳ್ಳಬೇಕೆಂದು ತಿಳಿಸಿ, ದೇಶಕ್ಕಾಗಿ ಹಾಗೂ ಸಾರ್ವಜನಿಕ ಹಿತಾಸಕ್ತಿಗಾಗಿ ಸೇವೆ ಸಲ್ಲಿಸುತ್ತಿರುವ ಪ್ರತಿಯೊಬ್ಬರನ್ನು ನಾವು ಗೌರವಿಸಬೇಕು. ಪರಿಸರ ರಕ್ಷಣೆಯು ನಮ್ಮೆಲ್ಲರ ಕರ್ತವ್ಯವಾಗಬೇಕು. ಪ್ರತಿಯೊಬ್ಬರು ತಮ್ಮ ಜವಾಬ್ದಾರಿಯನ್ನು ಅರಿತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆಯನ್ನು ನೀಡಬೇಕೆಂದು ಕರೆ ನೀಡಿದರು.
ತದನಂತರ ಶಾಲೆಯ ಆಂತರಿಕ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಮಹಾರಾಷ್ಟ್ರದಲ್ಲಿ ನಡೆದ ಸಿಬಿಎಸ್‌ಇ ದಕ್ಷಿಣ ವಲಯ-2ರ ಜೂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಾಲೆಯ 8ನೆಯ ತರಗತಿಯ ಕುಮಾರಿ ಭೂಮಿಕಾ ಕೆ ಎಂಬ ವಿದ್ಯಾರ್ಥಿಯನ್ನು ಅಭಿನಂದಿಸಲಾಯಿತು.
ವಿದ್ಯಾರ್ಥಿಗಳಿಂದ ದೇಶ ಭಕ್ತಿಯನ್ನು ಬಿಂಬಿಸುವ ನೃತ್ಯ ರೂಪಕಗಳು, ಸಂಗೀತ ಕಾರ್ಯಕ್ರಮಗಳು, ಭಾಷಣಗಳು ಜರುಗಿದವು.
ಈ ಕಾರ್ಯಕ್ರಮದಲ್ಲಿ ಉದ್ಯಮಿಗಳಾದವೆಂಕಟಪತಿರಾಜು, ಪಿ.ಯು ಕಾಲೇಜಿನ ನಿರ್ದೇಶಕರು ಹಾಗೂ ಪ್ರಾಂಶುಪಾಲರಾದ ಜಗನ್ನಾಥ್ ರಾವ್, ಶಾಲೆಯ ಶೈಕ್ಷಣಿಕ ನಿರ್ದೇಶಕರಾದ ಎಸ್. ಕೃಷ್ಣವೇಣಿ, ಪ್ರಾಥಮಿಕ ವಿಭಾಗದ ಶೈಕ್ಷಣಿಕ ಮುಖ್ಯಸ್ಥರಾದ ಲಕ್ಷ್ಮೀ ಜೆ, ಕ್ಯಾಂಪಸ್ ಉಸ್ತುವಾರಿಯಾದ ನಾಗೇಶ, ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ. ಅನಂತ್ ದೇಸಾಯಿ, ಕಾರ್ಯದರ್ಶಿಯಾದ ಶ್ರೀ ಮಂಜುನಾಥ, ಪಿ.ಆರ್.ಎಮ್ ನಿಂಗಪ್ಪ, ಕಾಳೇಶ, ಶಾಲೆಯ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಮತ್ತು ಪಾಲಕರು ಭಾಗವಹಿಸಿದ್ದರು. ಕುಮಾರಿ ತುಳಸಿ ಮತ್ತು ಕುಮಾರಿ ಲಕ್ಷ್ಮೀ ಪ್ರಸನ್ನ ಕಾರ್ಯಕ್ರಮದ ನಿರೂಪಣೆ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 