ನೇಮಕಾತಿಗೆ ಬಂದಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್
Gangrape of a young woman who had come for recruitment
ಪಾಟ್ನಾ 26: ಬಿಹಾರದ ಗಯಾ ಜಿಲ್ಲೆಯಲ್ಲಿ ಹೋಂ ಗಾರ್ಡ್ ನೇಮಕಾತಿ ಅಭಿಯಾನದಲ್ಲಿ ಭಾಗವಹಿಸಿದ್ದ 26 ವರ್ಷದ ಯುವತಿಯ ಮೇಲೆ ಚಲಿಸುತ್ತಿದ್ದ ಆ್ಯಂಬುಲೆನ್ಸ್ ನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ವರದಿಯಾಗಿದೆ.
ಗೃಹರಕ್ಷಕ ದಳ ನೇಮಕಾತಿಯ ದೈಹಿಕ ಪರೀಕ್ಷೆಯ ವೇಳೆ ಯುವತಿ ಕುಸಿದು ಬಿದ್ದಿದ್ದಳು. ಆಕೆಯನ್ನು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಆ್ಯಂಬುಲೆನ್ಸ್ ನಲ್ಲಿ ಆಕೆಯ ಮೇಲೆ ದೌರ್ಜನ್ಯ ಎಸಗಲಾಗಿದೆ.
ಜುಲೈ 24ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ಬೋಧ್ ಗಯಾದ ಬಿಹಾರ್ ಮಿಲಿಟರಿ ಪೊಲೀಸ್ ಮೈದಾನದಲ್ಲಿ ಹೋಗಾರ್ಡ್ ನೇಮಕಾತಿ ನಡೆಯುತ್ತಿತ್ತು. ದೈಹಿಕ ಪರೀಕ್ಷೆಯ ವೇಳೆ ಯುವತಿ ಮೂರ್ಛೆ ತಪ್ಪಿ ಬಿದ್ದಿದ್ದಳು.
ಕಾರ್ಯಕ್ರಮ ಆಯೋಜಕರು ಸ್ಥಳದಲ್ಲಿ ನಿಲ್ಲಿಸಲಾಗಿದ್ದ ಆ್ಯಂಬ್ಯುಲೆನ್ಸ್ ಮೂಲಕ ಆಕೆಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದರು. ಮಹಿಳೆ ಪ್ರಜ್ಞಾಹೀನಳಾಗಿದ್ದಾಗ ಆಂಬ್ಯುಲೆನ್ಸ್ ಒಳಗೆ ಹಲವಾರು ವ್ಯಕ್ತಿಗಳು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.
ಬೋಧ್ ಗಯಾ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಎಸ್ ಐಟಿ ಮತ್ತು ವಿಧಿವಿಜ್ಞಾನ ತಂಡವು ತನಿಖೆ ನಡೆಸುತ್ತಿದೆ. ಎಫ್ ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಆ್ಯಂಬುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ಟೆಕ್ನಿಷಿಯನ್ ಅಜಿತ್ ಕುಮಾರ್ ಎಂದು ಗುರುತಿಸಲಾಗಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 