ಗಣಪತಿ ಹಬ್ಬದ ವಿವಾದ: ಪ್ರತಾಪ್ ಸಿಂಹ ಹೇಳಿಕೆ ಖಂಡಿಸಿ ಕ್ಷಮೆಯಾಚನೆಗೆ ಆಗ್ರಹ
Ganpati festival controversy: Condemnation of Pratap Simha's statement; demand for an apology
ಬಳ್ಳಾರಿ, ಸೆ. 24: ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಗಣಪತಿ ಹಬ್ಬದ ವೇಳೆ ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಹಾಗೂ ಪತ್ರಕರ್ತ ಪ್ರತಾಪ್ ಸಿಂಹ ಅವರು ದಲಿತರು ಮತ್ತು ದಲಿತ ಸಂಘರ್ಷ ಸಮಿತಿಯನ್ನು ಅವಮಾನಿಸುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ದಲಿತ ಸಂಘರ್ಷ ಸಮಿತಿ ಪ್ರತಿಭಟನೆಗೆ ಕರೆ ನೀಡಿದೆ.
ನಗರದ ಮರ್ಚಾಡ್ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿದ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಆರಿ್ಡ. ಸಾಗರ್ ಬದನ ಅವರು, ಪ್ರತಾಪ್ ಸಿಂಹ ಅವರ ಹೇಳಿಕೆಗಳನ್ನು ಖಂಡಿಸಿದರು. ದಲಿತ ಸಮುದಾಯ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಗೌರವಯುತವಾಗಿ ಮಾತನಾಡಬೇಕು ಎಂದು ಆಗ್ರಹಿಸಿದರು.
ದಲಿತರು ಕೇವಲ ನೀಲಿ ಶಾಲು ಹಾಕಿಕೊಂಡು ಬರುತ್ತಾರೆ ಎಂಬ ರೀತಿಯ ಹೇಳಿಕೆ ನೀಡಿರುವುದು ದಲಿತ ಸಮುದಾಯದ ಭಾವನೆಗಳಿಗೆ ನೋವುಂಟುಮಾಡಿದೆ ಎಂದು ಅವರು ಆರೋಪಿಸಿದರು. ದಲಿತ ಸಂಘರ್ಷ ಸಮಿತಿ ಹಲವು ದಶಕಗಳಿಂದ ಡಾ. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಆಧರಿಸಿ ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಸಂವಿಧಾನಾತ್ಮಕ ಮೌಲ್ಯಗಳಿಗಾಗಿ ಹೋರಾಟ ನಡೆಸುತ್ತಿದೆ ಎಂದು ತಿಳಿಸಿದರು.
ಟಿ. ನರಸೀಪುರದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ನೀಲಿ ಶಾಲಿನ ಕುರಿತು ಪ್ರತಾಪ್ ಸಿಂಹ ನೀಡಿರುವ ಹೇಳಿಕೆಗಳನ್ನು ಹಿಂಪಡೆದು, ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ಜಾತಿ ಆಧಾರಿತ ಸಂಘರ್ಷಕ್ಕೆ ಕಾರಣವಾಗುವ ಹೇಳಿಕೆಗಳು ಮತ್ತು ನಡೆಗಳು ಸಮಾಜದಲ್ಲಿ ಉದ್ವಿಗ್ನತೆಗೆ ಕಾರಣವಾಗಬಾರದು. ಸಾಮಾಜಿಕ ಶಾಂತಿ ಹಾಗೂ ಸೌಹಾರ್ದ ಕಾಪಾಡುವುದು ಸರ್ಕಾರ ಮತ್ತು ನಾಗರಿಕರ ಜವಾಬ್ದಾರಿಯಾಗಿದೆ ಎಂದು ಸಂಘಟನೆ ತಿಳಿಸಿದೆ.
ದಲಿತ ಸಂಘರ್ಷ ಸಮಿತಿಯ ಹೋರಾಟದ ಇತಿಹಾಸವನ್ನು ಅರ್ಥಮಾಡಿಕೊಂಡು, ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಸಂವಿಧಾನಾತ್ಮಕ ಮೌಲ್ಯಗಳ ಕುರಿತು ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದು ಆಗ್ರಹಿಸಲಾಯಿತು.
ಜಾತಿ ಮತ್ತು ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟುಮಾಡುವ ಹೇಳಿಕೆಗಳು ಅಥವಾ ನಡೆಗಳ ಕುರಿತು ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ಸಂಘಟನೆ ಒತ್ತಾಯಿಸಿತು.
ಸುದ್ದಿಗೋಷ್ಠಿಯಲ್ಲಿ ಛಲವಾದಿ ಮಹಾಸಭಾದ ರಾಜ್ಯ ಉಪಾಧ್ಯಕ್ಷ ನರಸಪ್ಪ, ಜಿಲ್ಲಾ ಸಂಘಟನಾ ಸಂಚಾಲಕ ದೇವದಾಸ ಕೆ., ಎಚ್. ಆಂಜನೇಯ, ಕೊಳಗಲ್ಲು ಮಲ್ಲಯ್ಯ, ಬಿ. ರಮೇಶ್, ಟಿ.ಎಂ. ಎರಿಸ್ವಾಮಿ, ಬೆಳಗಲ್ ಹುಲುಗಪ್ಪ, ಎಚ್. ಮಲ್ಲಪ್ಪ, ಶಂಕರ್ ಬಾಪೂಜಿ ನಗರ, ಎರಿಸ್ವಾಮಿ ಹಲಕುಂದಿ, ಭೀಮಶಂಕರ್, ದುರ್ಗಾದಾಸ್, ಹನುಮಂತಪ್ಪ ಎತ್ತಿನಬೂದಿಹಾಳ್, ಶಿವು ಅಸೂಂಡಿ, ಲಕ್ಷ್ಮಣ ಬಂಡಿಹಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 