ಚೀನಾದ ಲಿಯಾನಿಂಗ್‌ನಲ್ಲಿ ಅನಿಲ ಸಿಲಿಂಡರ್ ಸ್ಫೋಟ: ಮೂವರು ಸಾವು

 ಶೆನ್ಯಾಂಗ್, ಜೂನ್ 19,ಈಶಾನ್ಯ ಚೀನಾದ ಲಿಯಾನಿಂಗ್ ಪ್ರಾಂತ್ಯದ ದಾಂಡೊಂಗ್ ನಗರದ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅನಿಲ ಸಿಲಿಂಡರ್‍ ಸ್ಫೋಟದಿಂದ ಮೂವರು ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ.ಜೆನ್ಸಿಂಗ್ ಜಿಲ್ಲೆಯಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಗಾಯಗೊಂಡ ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.  ಮನೆಯಲ್ಲಿ ಜಗಳದಿಂದ ಅನಿಲ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕಟ್ಟಡದಲ್ಲಿದ್ದ ಎಲ್ಲ ನಿವಾಸಿಗಳನ್ನು ಸ್ಥಳಾಂತರಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.