ಕೊಪ್ಪಳ 27: ಗೌರಿ-ಗಣೇಶ ಹಾಗೂ ಮೊಹರಂ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಮತ್ತು ಪರಿಸರ ಸ್ನೇಹಿಯನ್ನಾಗಿ ಆಚರಿಸಲು ಜಿಲ್ಲಾಡಳಿತ ಅಗತ್ಯ ಸಹಕಾರ ನೀಡಲಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ಕುಮಾರ್ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು (ಆಗಸ್ಟ್.27) ಏರ್ಪಡಿಸಲಾಗಿದ್ದ ಮೊಹರಂ ಹಾಗೂ ಗೌರಿ-ಗಣೇಶ ಹಬ್ಬ ಆಚರಿಸುವ ಕುರಿತು ಜಿಲ್ಲಾ ಮಟ್ಟದ ಶಾಂತಿಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜಿಲ್ಲೆಯಲ್ಲಿ ಮೊಹರಂ ಹಾಗೂ ಗೌರಿ-ಗಣೇಶ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕು. ಕಳೆದ ವರ್ಷದಂತೆ ಈ ವರ್ಷವೂ ಹೆಚ್ಚಿನ ಶಬ್ದ ಹೊರಸೂಸುವ ಡಿಜೆ ಸೌಂಡ್ಸಿಸ್ಟಂ ಅನ್ನು ನಿಷೇಧಿಸಲಾಗಿದೆ ಹಾಗೂ ಶಬ್ಧದ ತೀವ್ರತೆ ಅಳೆಯುವ ಮಾಪನ ಯಂತ್ರಗಳನ್ನು ಬಳಸಲಾಗುತ್ತಿದೆ. ಆದ್ದರಿಂದ ಗಣೇಶ ಮೂತರ್ಿ ಪ್ರತಿಷ್ಠಾಪನಾ ಮಂಡಳಿಯವರು ಸಹಕರಿಸಬೇಕು. ಮೊಹರಂ ಹಬ್ಬವೂ ಕೂಡ ಗಣೇಶ ಹಬ್ಬದ ಸಂದರ್ಭದಲ್ಲಿಯೇ ಆಚರಿಸಲಾಗುವುದರಿಂದ ಈ ಎರಡು ಹಬ್ಬಗಳನ್ನು ಎಲ್ಲ ಸಮುದಾಯದವರು ಪರಸ್ಪರ ಸೌಹರ್ದತೆ ಹಾಗೂ ಭಾವೈಕ್ಯತೆಯಿಂದ ಆಚರಿಸಬೇಕು. ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ಮೂರ್ತಿಗಳನ್ನು ತಯಾರಿಸುವುದನ್ನು ಜಿಲ್ಲೆಯಲ್ಲಿ ಸಂಪೂರ್ಣ ನಿಷೇಧಿಸಿದ್ದು, ಮೂತರ್ಿ ತಯಾರಕರು ಕಡ್ಡಾಯವಾಗಿ ಮಣ್ಣಿನಿಂದಲೇ ಗಣೇಶ ಮೂತರ್ಿಗಳನ್ನು ತಯಾರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪನೆ ಮಾಡುವಾಗ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಎಚ್ಚರ ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂತರ್ಿ ಕೂರಿಸುವ ಸಂಘಟಕರು ನಗರಸಭೆ, ಜೆಸ್ಕಾಂ ಹಾಗೂ ಪೊಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಪೊಲೀಸ್ ಠಾಣೆಗಳಲ್ಲಿ ಏಕ-ಗವಾಕ್ಷಿ ಪದ್ಧತಿಯಲ್ಲಿ ಪರವಾನಗಿ ಒದಗಿಸಲಾಗುವುದು. ವಿದ್ಯುತ್ ತಂತಿ, ವಿದ್ಯುತ್ ಕಂಬಗಳಿಂದ ಸುರಕ್ಷಿತ ಅಂತರದಲ್ಲಿ ಚಿಕ್ಕ ಗಾತ್ರದ ಪರಿಸರ ಸ್ನೇಹಿ ಗಣೇಶ ಮೂತರ್ಿಯನ್ನು ಕೂರಿಸಬೇಕು. ಕೊಪ್ಪಳ ನಗರ ವ್ಯಾಪ್ತಿಯ ಗಣೇಶ ಮೂತರ್ಿ ವಿಸರ್ಜನೆಗೆ ಹುಲಿಕೆರೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಕೆರೆಯ ಆಳ ಹಾಗೂ ನೀರಿನ ಪ್ರಮಾಣ ಹೆಚ್ಚಿರುವುದರಿಂದ ವಿಸರ್ಜನೆ ಸಂದರ್ಭ ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಆಳದವರೆಗೆ ಬ್ಯಾರಿಕೇಡ್ಗಳನ್ನು ನಿಮರ್ಿಸಲು ನಗರಸಭೆ ಆಯುಕ್ತರಿಗೆ ಸೂಚನೆ ನೀಡಿದರು. ವಿಸರ್ಜನಾ ಮೆರವಣಿಗೆ ಸಂದರ್ಭ ಮಂಡಳಿ ಸದಸ್ಯರು ಮದ್ಯಪಾನ ಮಾಡಿ ಗಲಾಟೆ ಮಾಡುವುದು, ಅಶ್ಲೀಲ ನೃತ್ಯ ಮಾಡುವುದು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಆದೇಶವನ್ನು ಮೀರಿ ನಿಗದಿಗಿಂತ ಹೆಚ್ಚಿನ ಶಬ್ಧ ಹೊರಸೂಸುವ ಡಿಜೆ ಸಿಸ್ಟಂಗಳನ್ನು ಬಳಸಿದರೆ ಅವುಗಳನ್ನು ಜಪ್ತಿ ಮಾಡಲಾಗುತ್ತದೆ ಆದ್ದರಿಂದ ಮಂಡಳಿಯವರು ಜಿಲ್ಲಾಡಳಿತದ ಸೂಚನೆಯನ್ನು ಅನುಸರಿಸಿ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಸಂಭ್ರಮದಿಂದ ಹಬ್ಬ ಆಚರಿಸುವಂತೆ ಮಂಡಳಿಯ ಮುಖಂಡರಿಗೆ ಅವರು ತಿಳಿಸಿದರು.
ವಿದ್ಯುತ್ ಸಂಪರ್ಕ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಕ್ರಮ ವಹಿಸಬೇಕು. ಹಬ್ಬವನ್ನು ಪರಿಸರ ಸ್ನೇಹಿಯನ್ನಾಗಿಸಲು ಮಣ್ಣಿನಿಂದ ಮಾಡಿದ ಗಣಪತಿ ಮೂತರ್ಿಯನ್ನೇ ಸಾರ್ವಜನಿಕರು ಕಡ್ಡಾಯವಾಗಿ ಬಳಸಬೇಕು. ಕುಡಿಯುವ ನೀರಿನ ಮೂಲಗಳಾದ ಬಾವಿ, ಕರೆಗಳಲ್ಲಿ ರಾಸಾಯನಿಕ ಬಣ್ಣಯುಕ್ತ ಗಣೇಶ ಮೂರ್ತಿ ಗಳನ್ನು ವಿಸಜರ್ಿಸಬಾರದು. ಹೆಚ್ಚು ಶಬ್ದ ಬರುವ ಪಟಾಕಿಗಳು ವೃದ್ಧರು ಹಾಗೂ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ಅಂತಹ ಪಟಾಕಿಗಳನ್ನು ಬಳಸಬೇಡಿ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ಕುಮಾರ್ ಮನವಿ ಮಾಡಿಕೊಂಡರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ, ಡಿವೈಎಸ್ಪಿ ವೆಂಕಟಪ್ಪ ನಾಯಕ, ನಗರ ಸಭೆ ಆಯುಕ್ತ ಸುನೀಲ್ ಕುಮಾರ, ತಹಶೀಲ್ದಾರ ಮಜ್ಜಿಗಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಗಣೇಶ ಉತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.