ದುಶ್ಚಟ ಬಿಡುವಂತೆ ಕೈ ಮುಗಿದು ಯುವಕರಿಗೆ ಗವಿಶ್ರೀ ಸಲಹೆ

ದುಶ್ಚಟ ಬಿಡುವಂತೆ ಕೈ ಮುಗಿದು ಯುವಕರಿಗೆ ಗವಿಶ್ರೀ ಸಲಹೆ Gavishree advises young people to quit addictions

ದುಶ್ಚಟ ಬಿಡುವಂತೆ ಕೈ ಮುಗಿದು ಯುವಕರಿಗೆ ಗವಿಶ್ರೀ ಸಲಹೆ 

ವಿಜಯನಗರ(ಹೊಸಪೇಟೆ) 27 : ಸ್ವಸ್ಥ್ಯಾ ಸುಂದರ ಸಮಾಜ ನಿರ್ಮಿಸಲು ವ್ಯಸನ ಮುಕ್ತ ಸಮಾಜದ ಕನಸನ್ನು ಮಕ್ಕಳ ಎದೆಯಲ್ಲಿ ಬಿತ್ತಬೇಕಾದ ಅನಿವಾರ್ಯತೆ ಇದೆ ಎಂದು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅಭಿಮತ ವ್ಯಕ್ತಪಡಿಸಿದರು.  

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ನಗರಸಭೆ ಸಹಯೋಗದಲ್ಲಿ  ಏರಿ​‍್ಡಸಿದ್ದ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಗುರುವಾರ ಅವರು ಮಾತನಾಡಿದರು. ಮಕ್ಕಳು ತಂದೆ ತಾಯಿಯರ ಆಸ್ತಿ ಪಾಲುದಾರರಾಗುವ ಬದಲಾಗಿ ಅವರ ಆದರ್ಶಗಳಿಗೆ ಪಾಲುದಾರರಾಗಬೇಕಿದೆ. ಗುಟ್ಕಾ, ತಂಬಾಕು, ಇಸ್ಪೀಟ್ ಸೇರಿದಂತೆ ಯಥೇಚ್ಛಾ ಮೊಬೈಲ್ ಬಳಕೆಯು ಡ್ರಗ್ಸ್ಗೆ ಸಮಾನವಾಗಿದೆ. ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕೇವಲ ಸರ್ಕಾರವಷ್ಟೇ ಅಲ್ಲ, ಸಂಘ, ಸಂಸ್ಥೆಗಳು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.  

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶ್ರೀಹರಿಬಾಬು.ಬಿ.ಎಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಮಾದಕ ವಸ್ತುಗಳ ಬಳಕೆಯಿಂದಾಗಿ ಮಾನಸಿಕ ಮತ್ತು ದೈಹಿಕವಾಗಿ ದುಷ್ಪಾರಿಣಾಮಗಳು ಹೆಚ್ಚಾಗಲಿವೆ ಎಂದರು. ಅಕ್ರಮವಾಗಿ ಮದ್ಯ ಮಾರಾಟ ಹಾಗೂ ಮಾದಕ ವಸ್ತುಗಳ ಮಾರಾಟ ಮಾಡುವುದು, ಯಾವುದೇ ವ್ಯಕ್ತಿ ಸಾರ್ವಜನಿಕವಾಗಿ ಮದ್ಯ, ಮಾದಕ ವಸ್ತುಗಳ ಸೇವನೆ ಮಾಡುವುದು ಕಂಡು ಬಂದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಕರೆ ಮಾಡಿ ತಿಳಿಸಬಹುದು ಎಂದರು.  

ಇದೇ ವೇಳೆ ರಂಗಲೋಕ ಕಲಾ ಸಂಸ್ಥೆಯ ಕಲಾವಿದರು ನಾಟಕದ ಮೂಲಕ ಹಾಗೂ ಕಲಾವಿದ ಜೋಗಿ ತಾಯಪ್ಪ ಅವರು ಕಿರು ಚಿತ್ರ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು. ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ನಾಗರಾಜ ಹವಾಲ್ದಾರ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಜಂಬಯ್ಯ, ಡ್ರಗ್ಸ್‌ ನಿಯಂತ್ರಣಾಧಿಕಾರಿ ಜಿ.ವಿ.ನಾರಾಯಣ ರೆಡ್ಡಿ, ಪ್ರಕಾಶ ಶಾನುಬಾಗ್, ಡಿವೈಎಸ್ಪಿ ಮಂಜುನಾಥ ಸೇರಿದಂತೆ ಸಾವಿರಕ್ಕೂ ಹೆಚ್ಚು ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.