ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಧಾರ್ಮಿಕ ಸಾಮಾಜಿಕ ಸಾಂಪ್ರದಾಯಿಕ ಕಾರ್ಯಕ್ರಮಗಳ ಸಂಗಮ
Gavisiddeshwara Jatra Mahotsav is a confluence of religious, social and traditional programs
ಕೊಪ್ಪಳ 31: ದಕ್ಷಿಣ ಭಾರತದ ಕುಂಭಮೇಳವೆಂದು ಪ್ರಖ್ಯಾತಿ ಪಡೆದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಧಾರ್ಮಿಕ ಸಾಮಾಜಿಕ ಸಾಂಪ್ರದಾಯಿಕ ಕಾರ್ಯಕ್ರಮಗಳ ಸಂಗಮ. ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯ ನಾಡಿನ ಅನೇಕ ಭಕ್ತರು ವಿವಿಧ ವಿಶಿಷ್ಟ ಭಕ್ತಿ ಸೇವೆಗಳನ್ನು ಸಲ್ಲಿಸುವುದರ ಮೂಲಕ ಭಕ್ತಿ ಅರ್ಿಸುವದು ಅಪ್ಯಾಯಮಾನ ಹಾಗೆಯೇ ಜಹಗಿರ್ ಗುಡುದೂರಿನ ಸ್ನೇಹ ಜೀವಿ ಗೆಳೆಯರ ಬಳಗ ಲೈಟಿಂಗ್ ಅರೇಂಜೈಂಟ್ ಸೇವಾ ಮಂಡಳಿಯಿಂದ ಮಹಾ ಜಾತ್ರೋತ್ಸವಕ್ಕೆ ವಿವಿಧ ಬಣ್ಣ ಬಣ್ಣದ ವಿಶಿಷ್ಟ ಆಕರ್ಷಕ ಲೈಟಿಂಗ್ ಗಳನ್ನ ಗಂಜವೃತ್ತದಲ್ಲಿರುವ ಶ್ರೀ ಗವಿಸಿದ್ದೇಶ್ವರ ಮಹಾದ್ವಾರಕ್ಕೆ ತಮ್ಮ ಸೇವಾ ಸಮಿತಿ ವತಿಯಿಂದ ಉಚಿತವಾಗಿ ದೀಪ ಅಲಂಕಾರ ಗೊಳಿಸುವ ಮೂಲಕ ಜಾತ್ರಿಯ ವಿದ್ಯುತ್ ದೀಪ ಅಲಂಕಾರಕ್ಕೆ ಮತ್ತಷ್ಟು ಮೆರಗು ತಂದಿದ್ದಾರೆ. ವಿವಿಧ ಬಣ್ಣ ಬಣ್ಣದ ವಿದ್ಯುತ್ ದೀಪ ಅಲಂಕಾರ ಮಾಡಿದ್ದಾರೆ. 10 ಯುವಕರು ಒಂದು ದಿನ ಪೂರ್ತಿಯಾಗಿ ಈ ದೀಪಾಲಂಕಾರದ ಅಲಂಕಾರಿಕೆಯಲ್ಲಿ ತೊಡಗಿಕೊಂಡು ಸೇವೆಗೈದಿರುತ್ತಾರೆ. ಶ್ರೀ ಗವಿಸಿದ್ದೇಶ್ವರ ದ್ವಾರಬಾಗಿಲಿಗೆ ಇಂದು ಎರಡನೇ ಬಾರಿ ಅಲಂಕಾರ ಮಾಡಿದ್ದಾರೆ ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 