ಗವಿಸಿದ್ದೇಶ್ವರ ಜಾತ್ರೆ: ಆರೋಗ್ಯ ಇಲಾಖೆಯ ವಸ್ತು ಪ್ರದರ್ಶನಕ್ಕೆ ಚಾಲನೆ

ಕೊಪ್ಪಳ 14: ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜನವರಿ. 15 ರವರೆಗೆ ಹಮ್ಮಿಕೊಳ್ಳಲಾದ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಡಿ.ಹೆಚ್.ಒ ಡಾ. ಲಿಂಗರಾಜ ಅವರು ಚಾಲನೆ ನೀಡಿದರು.  

ಕೊಪ್ಪಳ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಕೊಪ್ಪಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಗವಿಸಿದ್ದೇಶ್ವರ ಜಾತ್ರಾ ಪ್ರಯುಕ್ತ ಜ. 12ರಂದು ಹಮ್ಮಿಕೊಂಡಿದ್ದ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ, ಸಾಂಕ್ರಾಮಿಕ ರೋಗ ಮತ್ತು ಅಸಾಂಕ್ರಾಮಿಕ ರೋಗಗಳ ಕುರಿತು ಗವಿಮಠದ ಆವರಣದಲ್ಲಿ ``ವಸ್ತು ಪ್ರದರ್ಶನ'' ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜ ಅವರು ಮಾತನಾಡಿ, ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಲಕ್ಷಾಂತ ಜನರು ಸೇರಿರುವುದರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಯೋಜನೆಗಳ ಬಗ್ಗೆ ಜನರಿಗೆ ತಲುಪುವ ಉದ್ದೇಶದಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಾದ ತಾಯಿ ಮಕ್ಕಳ ಆರೋಗ್ಯ ಕಾರ್ಯಕ್ರಮಗಳಾದ ಜನನಿ ಸುರಕ್ಷಾ ಯೋಜನೆ, ಜನನಿ ಶಿಶು ಸುರಕ್ಷಾ ಕಾರ್ಯಕ್ರಮ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ, ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ, ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ, ರಾಷ್ಟ್ರೀಯ ಫ್ಲೋರೋಸಿಸ್ ತಡೆ ಹಾಗೂ ನಿಯಂತ್ರಣ ಕಾರ್ಯಕ್ರಮ ಆಯುಷ್ಮಾನ್ ಭಾರತ್ ಆರೋಗ್ಯ ಕನರ್ಾಟಕ ಕಾರ್ಯಕ್ರಮ, ಕುಟುಂಬ ಕಲ್ಯಾಣ ಕಾರ್ಯಕ್ರಮ, ಮತ್ತು ಸಾಂಕ್ರಾಮಿಕ ರೋಗಗಳಾದ ವಾಂತಿ ಬೇಧಿ, ಮಲೇರಿಯಾ, ಡೆಂಗ್ಯೂ, ಚಿಕನಗೂನ್ಯ, ಕ್ಷಯರೋಗ, ಕುಷ್ಠರೋಗ, ಮೆದುಳು ಜ್ವರ, ಆನೆಕಾಲು ರೋಗ, ಅಸಾಂಕ್ರಾಮಿಕ ರೋಗಗಳಾದ ಕ್ಯಾನ್ಸರ್, ಅಧಿಕ ರಕ್ತದ ಒತ್ತಡ, ಮಧುಮೇಹ, ಪಾಶ್ರ್ವವಾಯು, ಅಧಿಕ ಬೊಜ್ಜು ರೋಗಗಳ ಕುರಿತು ಚಿತ್ರಗಳ ಮೂಲಕ ಸಾರ್ವಜನಿಕರಿಗೆ ಕರಪತ್ರ ನೀಡುವುದರ ಮೂಲಕ ಇಲಾಖೆಯ ಸಿಬ್ಬಂದಿಗಳು, ಆರೋಗ್ಯ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಹಿರಿಯ, ಕಿರಿಯ ಆರೋಗ್ಯ ಸಹಾಯಕರು (ಮ/ಪು), ಇತರೆ ಸಿಬ್ಬಂದಿಗಳು ವಸ್ತು ಪ್ರದರ್ಶನದಲ್ಲಿ ಭಾಗವಹಿಸಿ ಮಾಹಿತಿಯನ್ನು ನೀಡುವುದರ ಜೊತೆಗೆ ಲಾರ್ವಾನಾಶಕ್ಕಾಗಿ, ಗಪ್ಪಿ ಮತ್ತು ಗ್ಯಾಬೂಸಿಯಾ ಮೀನುಗಳ ಪ್ರಾತ್ಯಾಕ್ಷತೆ ಮಾಡುವುದರ ಮೂಲಕ ಮಾಹಿತಿ ನೀಡುತ್ತಿದ್ದಾರೆ. ಇದೊಂದು ಉತ್ತಮ ವಸ್ತು ಪ್ರದರ್ಶನವಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳವಂತೆ ಸಾರ್ವಜನಿಕರಿಗೆ ತಿಳಿಸಿದರು. ಹಾಗೂ ಆರೋಗ್ಯ ತಪಾಷಣೆ ಶಿಬಿರ ಏರ್ಪಡಿಸಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಿದ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.  

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜಂಬಯ್ಯ ಬಿ, ಡಾ. ಜಿಲ್ಲಾ ಆಯುಷ ಅಧಿಕಾರಿ ಬಸವರಾಜ ಕುಂಬಾರ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಎಸ್.ಕೆ ದೇಸಾಯಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಪ್ರಕಾಶ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಮಹೇಶ ಎಂ.ಜಿ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ. ಗೌರಿಶಂಕರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಮಾಂಜನೇಯ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.