ಗೀತಾ ಸ್ಪರ್ಧೆ: ಕಾಲೇಜಿಗೆ ಕೀರ್ತಿ

Geeta competition

ಕಂಪ್ಲಿ:ಮೇ.10. ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಗೀತಾ ಗಾಯನ ಸ್ಪರ್ಧೆಗಳಲ್ಲಿ ಕಂಪ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ತನ್ನಾಗಿಸಿಕೊಂಡು, ಕಾಲೇಜಿಗೆ ಕೀರ್ತಿ ತಂದಿದ್ದಾರೆ. 

ಬಳ್ಳಾರಿ ಇನ್ಸಿ-್ಟಟೂಟ್ ಆಪ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್(ಬಿಐಟಿಎಂ) ವತಿಯಿಂದ “ಅಭಿವೃದ್ಧಿ 2025” ಶೀರ್ಷಿಕೆಯ ಅಡಿಯಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಲವಾರು ಸ್ಪರ್ಧೆಗಳನ್ನು ಇತ್ತೀಚೆಗೆ ಏರಿ​‍್ಡಸಲಾಗಿತ್ತು. ಈ ಎಲ್ಲಾ ಸ್ಪರ್ಧೆಗಳಲ್ಲಿ 32 ಮಹಾವಿದ್ಯಾಲಯಗಳಿಂದ 500 ಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಕಂಪ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು 3 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದು, ಸಾಂಸ್ಕೃತಿಕ ಕಾರ್ಯಕ್ರಮದ “ಗೀತಾ ಗಾಯನ” ಸ್ಪರ್ಧೆಯಲ್ಲಿ ದೀಪಿಕಾ, ಭೂಮಿಕ, ಮಾನಸ ಮತ್ತು ಅನಿತ ಇವರು ಭಾಗವಹಿಸಿ, ಪ್ರಥಮ ಬಹುಮಾನ ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿಜೇತ ವಿದ್ಯಾರ್ಥಿಗಳಿಗೆ ಮಹಾವಿದ್ಯಾಲಯದ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.