ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಿದ್ದತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ

ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಿದ್ದತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ  Get ready for a meaningful Independence Day celebration: Additional District Collector

ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಿದ್ದತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ  

ಕಾರವಾರ, ಜು.31:- ಆಗಸ್ಟ್‌ 15 ರಂದು ಕಾರವಾರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಜರುಗುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಮತ್ತು ವ್ಯವಸ್ಥಿತ ರೀತಿಯಲ್ಲಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚಿಸಿದರು.  

ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  

ಸ್ವಾತಂತ್ರ್ಯೋತ್ಸವ  ಕಾರ್ಯಕ್ರಮದ ಕುರಿತು ಆಹ್ವಾನ ಪತ್ರಿಕೆಗಳನ್ನು ಶಿಷ್ಠಾಚಾರದಂತೆ ಮುದ್ರಿಸಿ, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳಿಗೆ ತಲುಪಿಸಬೇಕು. ಕಾರ್ಯಕ್ರಮದಲ್ಲಿ ಪೊಲೀಸ್, ಗೃಹರಕ್ಷಕ, ಅರಣ್ಯ, ಎನ್‌.ಸಿ.ಸಿ., ಸ್ಕೌಟ್ಸ್‌ ಮತ್ತು ಗೈಡ್ಸ್‌ ತಂಡಗಳಿಂದ ಆಕರ್ಷಕ ಪಥ ಸಂಚಲನ ಏರಿ​‍್ಡಸುವಂತೆ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತೆ ಮತ್ತು ಕಾರ್ಯಕ್ರಮದ ಯಾವುದೇ ಸಂದರ್ಭದಲ್ಲಿ ಶಿಷ್ಠಾಚಾರದ ಉಲ್ಲಂಘನೆ ಆಗದಂತೆ ಎಚ್ಚರವಹಿಸುವಂತೆ ಸೂಚಿಸಿದರು. 

ಆಗಸ್ಟ್‌ 15 ರಂದು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಲಾ ಅಧಿಕಾರಿಗಳು ಸಿಬ್ಬಂದಿಗಳು ಭಾಗವಹಿಸಿ ಸ್ವಾತಂತ್ರ್ಯೋತ್ಸವ  ಆಚರಣೆಯನ್ನು ನಡೆಸುವಂತೆ ಸೂಚಿಸಿದ ಅಪರ ಜಿಲ್ಲಾಧಿಕಾರಿಗಳು, ಎಲ್ಲಾ ಸರಕಾರಿ ಕಟ್ಟಡಗಳ ಮೇಲೆ ವಿದ್ಯುತ್ ದೀಪಾಲಂಕಾರವನ್ನು ಮಾಡುವಂತೆ ತಿಳಿಸಿದರು. 

ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ಧ್ವಜಗಳ ಮಾರಾಟವಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಪರಿಸರ ಇಲಾಖೆ ಅಧಿಕಾರಿಗಳು ಮತ್ತು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ ಅವರು, ಪ್ಲಾಸ್ಟಿಕ್ ಧ್ವಜಗಳ ಮಾರಾಟ ಈಗಾಗಲೇ ನಿಷೇಧವಾಗಿದ್ದು ಈ ಬಗ್ಗೆ ಜಿಲ್ಲೆಯಾದ್ಯಂತ ವ್ಯಾಪಕ ರೀತಿಯಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವಂತೆ ತಿಳಿಸಿದರು. 

ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸುವ ನಿಟ್ಟಿನಲ್ಲಿ ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಹಲವು ಸಮಿತಿಗಳನ್ನು ರಚಿಸಿದ ಅಪರ ಜಿಲ್ಲಾಧಿಕಾರಿಗಳು, ಎಲ್ಲಾ ಸಮಿತಿಯ ಸದಸ್ಯರು ತಮ್ಮ ಜವಾಬ್ದಾರಿಯನ್ನು ಅರಿತು ಸಮನ್ವಯದಿಂದ , ಯಾವುದೇ ಲೋಪವಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಹಾಗೂ ಸ್ವಾತಂತ್ರ್ಯೋತ್ಸವ  ದಿನಾಚರಣೆಯ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಿದರು. 

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಕಲ್ಯಾಣಿ ಕಾಂಭ್ಳೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು