ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಏಪ್ರಿಲ್ 10ರ ರಾಜ್ಯಮಟ್ಟದ ಜನಸಮಾವೇಶಕ್ಕೆ ಸಜ್ಜು!
Get ready for a state-level public rally on April 10th to oppose the closure of government schools!
ಲೋಕದರ್ಶನ ವರದಿ
ಧಾರವಾಡ 07 : ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000 ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದರ ವಿರುದ್ದ ಏಪ್ರಿಲ್ 10 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಬೃಹತ್ ಜನ ಸಮಾವೇಶಕ್ಕೆ ಧಾರವಾಡದ ವಿವಿಧ ಹಳ್ಳಿಗಳಲ್ಲಿ ಭರದಿಂದ ತಯಾರಿ ನಡೆದಿದೆ. ಈಲ್ಲೆಯ ಖಾನಾಪುರ, ವನಹಳ್ಳಿ, ತಲವಾಯಿ, ಜುಂಜನ್ ಬೈಲ್ ತಾಂಡಾ ಗೌಳಿದಡ್ಡಿ, ಹೆಗ್ಗೆರಿ, ಮುಳಮುತ್ತಲ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಈಗಾಗಲೇ ಎಐಡಿಎಸ್‌ಒ ನೇತೃತ್ವದಲ್ಲಿ ಸಭೆ ನಡೆಸಿರುವ ಗ್ರಾಮಸ್ಥರು ಮನೆ-ಮನೆಗೆ ತೆರಳಿ ಪೋಷಕರನ್ನು ಹೋರಾಟಕ್ಕೆ ಸಜ್ಜುಗೊಳಿಸುತ್ತಿದ್ದಾರೆ
ಕಳೆದ 4 ತಿಂಗಳಿನಿಂದ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ ಜನ ಹೋರಾಟ ನಡೆದಿದೆ. ಎಐಡಿಎಸ್‌ಒ ನೇತೃತ್ವದಲ್ಲಿ ಹಳ್ಳಿ-ಹಳ್ಳಿಗಳಲ್ಲಿ ಪೋಷಕರು ಹಾಗೂ ಗ್ರಾಮಸ್ಥರು ಸಾರ್ವಜನಿಕ ಶಿಕ್ಷಣ ಉಳಿಸಿ ಹೋರಾಟ ಸಮಿತಿಗಳನ್ನು ರಚಿಸಿಕೊಂಡು ನಮ್ಮೂರ ಶಾಲೆ ಮುಚ್ಚಲು ಬಿಡುವುದಿಲ್ಲ ಎಂದು ಒಕ್ಕೊರಲಿನಿಂದ ಧ್ವನಿಯೆತ್ತಿದ್ದಾರೆ. ಈಲ್ಲೆಯ ಹಾಗೂ ನಾಡಿನ ಹೆಸರಾಂತ ಸಾಹಿತಿಗಳು, ಶಿಕ್ಷಣ ತಜ್ಞರು ಹಾಗೂ ಶಿಕ್ಷಣ ಪ್ರೇಮಿಗಳು ಬಡಮಕ್ಕಳನ್ನು ಶಿಕ್ಷಣದಿಂದ ಶಾಶ್ವತವಾಗಿ ದೂರ ತಳ್ಳುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ.
ನಾಡಿನ ಜನತೆಯ ತೀವ್ರ ವಿರೋಧದ ನಡುವೆಯೂ ಸರ್ಕಾರ ಶಾಲೆಗಳನ್ನು ಮುಚ್ಚುವ ಕೆಲಸವನ್ನು ಮುಂದುವರಿಸಿದೆ. ಸರ್ಕಾರವು ಈಗಾಗಲೇ ಯಾವ-ಯಾವ ಶಾಲೆಗಳನ್ನು ವೀಲೀನಗೊಳಿಸಬೇಕೆಂದು ಮ್ಯಾಪಿಂಗ್ ನಡೆಸಿದೆ. ಅಧಿಕಾರಿಗಳಿಂದ ಮ್ಯಾಗ್ನೆಟ್ ಶಾಲೆಯ ಸಮೀಕ್ಷೆ ಮಾಡಿಸಲಾಗುತ್ತಿದೆ. ವೀಲೀನಗೊಳ್ಳುವ ಶಾಲೆಗಳ ಮುಖ್ಯಶಿಕ್ಷಕರಿಗೆ ಮೌಖಿಕವಾಗಿ ಆದೇಶ ನೀಡಲಾಗಿದೆ. ಏಪ್ರಿಲ್ 9 ಮತ್ತು 10 ರಂದು ನಡೆಯಲಿರುವ ಪೋಷಕರ ಸಭೆಗಳಲ್ಲಿ , ಮುಂದಿನ ಶೈಕ್ಷಣಿಕ ವರ್ಷದಲ್ಲಿ ತಮ್ಮ ಮಕ್ಕಳನ್ನು ಏಕಖ ಶಾಲೆಗೆ ಕಳುಹಿಸುವಂತೆ ಒತ್ತಾಯಿಸಲು ಶಾಲೆಗಳಿಗೆ ನೋಟಿಸ್ ನೀಡಲಾಗಿದೆ. ಈ ಯೋಜನೆಯನ್ನು ಶತಾಯಗತಾಯ ಅನುಷ್ಠಾನಗೊಳಿಸಲು ಏಪ್ರಿಲ್ ಒಂದರಂದು ಜಿಲ್ಲೆಯ ಡಿಡಿಪಿಐ ಹಾಗೂ ಬಿಇಓಗಳ ಸಭೆಯನ್ನು ನಡೆಸಿ ಶಾಲೆ ಮುಚ್ಚಲು ಕುತಂತ್ರ ನಡೆಸಿದೆ.
ಸರ್ಕಾರದ ಈ ಕಡು ಜನವಿರೋಧಿ ಮತ್ತು ನಿರಂಕುಶ ನಡೆಯ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲು ಎಐಡಿಎ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಗಳು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ರಾಜ್ಯಮಟ್ಟದ ಜನ ಸಮಾವೇಶವನ್ನು 10 ಏಪ್ರಿ?? 2026ರಂದು ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಆಯೋಜಿಸಲಾಗಿದೆ. ರಾಜ್ಯದ ಹಳ್ಳಿ-ಹಳ್ಳಿಗಳಿಂದ ಪೋಷಕರು ಹಾಗೂ ವಿದ್ಯಾರ್ಥಿಗಳು ‘ನಮ್ಮೂರ ಶಾಲೆ ಉಳಿಯಲಿ’ ಎಂಬ ಘೋಷಗಳನ್ನು ಮೊಳಗಿಸುತ್ತ ಸಹಸ್ರ ಸಂಖ್ಯೆಯಲ್ಲಿ ಬೆಂಗಳೂರಿಗೆ ಬರಲು ತಯಾರಿ ನಡೆಸಿದ್ದಾರೆ.
ನಾಡಿನ ಹಿರಿಯ ಸಾಹಿತಿಗಳಾದ ಡಾ. ಹಂಪ ನಾಗರಾಜಯ್ಯ, ಡಾ. ಕೆ ಮರುಳಸಿದ್ದಪ್ಪ, ಪ್ರೊ ಎಸ್ ಜಿ ಸಿದ್ದರಾಮಯ್ಯ, ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ರಾಜ್ಯಾಧ್ಯಕ್ಷರು ಹಾಗೂ ಸಾಹಿತಿಗಳಾದ ಡಾ. ಅಲ್ಲಮಪ್ರಭು ಬೆಟ್ಟದೂರು, ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಎ ಮುರಿಗೆಪ್ಪ, ಹಿರಿಯ ಹೋರಾಟಗಾರರಾದ ಶ್ರೀ ರಾಘವೇಂದ್ರ ಕುಷ್ಟಗಿ, ಹಿರಿಯ ನ್ಯಾಯವಾದಿಗಳಾದ ಶ್ರೀಮತಿ ಹೇಮಲತಾ ಮಹಿಷಿ, ಶಿಕ್ಷಣ ತಜ್ಞರಾದ ನಿರಂಜನರಾಧ್ಯ ವಿ ಪಿ, ದಲಿತ ಸಂಘರ್ಷ ಸಮಿತಿಯ ನಾಯಕರಾದ ಗುರುಪ್ರಸಾದ್ ಕೆರೆಗೋಡು, ಮಾವಳ್ಳಿ ಶಂಕರ್, ಅಕ್ಕಮಹಾದೇವಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ ಸಬಿಹಾ ಭೂಮಿಗೌಡ, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಸಾಮಾಜಿಕ ಹೋರಾಟಗಾರರಾದ ಉಗ್ರ ನರಸಿಂಹೇಗೌಡ,
ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿಗಳಾದ ಅಜಯ್ ಕಾಮತ್, ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ವಿಎನ್ ರಾಜಶೇಖರ್, ಎಐಕೆಕೆಎಂಎಸ್ ರೈತ ಸಂಘಟನೆಯ ರಾಜ್ಯಾಧ್ಯಕ್ಷರಾದ ಶಶಿಧರ್ ಎಂ, ಎ ಐ ಯು ಟಿ ಯು ಸಿ ಕಾರ್ಮಿಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಸೋಮಶೇಖರ ಕೆ, ಎಐಡಿಎಸ್‌ಒ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿಗಳಾದ ಶೋಭಾ ಎಸ್, ಎಐಡಿವೈಓ ಯುವಜನ ಸಂಘಟನೆಯ ರಾಜ್ಯ ಕಾರ್ಯದರ್ಶಿಗಳಾದ ಸಿದ್ಧಲಿಂಗ ಬಾಗೇವಾಡಿ ಹಾಗೂ ಎಐಡಿಎಸ್‌ಒ ರಾಜ್ಯಾಧ್ಯಕ್ಷರಾದ ಅಶ್ವಿನಿ ಕೆ ಎಸ್ ಸೇರಿದಂತೆ ನಾಡಿನ ಅನೇಕ ಸಾಹಿತಿಗಳು ಹೋರಾಟಗಾರರು ಹಾಗೂ ಶಿಕ್ಷಣ ತಜ್ಞರು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧದ ರಾಜ್ಯಮಟ್ಟದ ಜನಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 