ಗಜಲ್: ಮಲ್ಲಿಕ್ ರಿಹಾನ್ ರಾಜ್ಯ ಮಟ್ಟಕ್ಕೆ ಆಯ್ಕೆ
Ghazal: Malik Rihan selected for state level
ಹೂವಿನ ಹಡಗಲಿ 17 : ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತಾಲೂಕಿನ ಹಿರೇಹಡಗಲಿಯ ವಿಕೆಕೆ ಕೆಪಿಎಸ್ ಪ್ರೌಢಶಾಲೆಯ ವಿದ್ಯಾರ್ಥಿ ಮಲ್ಲಿಕ್ ರಿಹಾನ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಈಚೆಗೆ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಹಂತದ ಪ್ರೌಢಶಾಲಾ ವಿಭಾಗದ ಗಜಲ್ ಹಾಡುಗಾರಿಕೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಉಪಪ್ರಾಚಾರ್ಯರಾದ ಪಾಂಡುನಾಯ್ಕ್ ಡಿ , ಮಾರ್ಗದರ್ಶಿ ಶಿಕ್ಷಕರಾದ ದಾದಾಪೀರ್‌ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಯಮನೇಶ್ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹೇಶ್ ಪೂಜಾರ್, ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ , ಶಿಕ್ಷಕರಾದ ಸಿ ಸೋಮೇಶ್, ಎಚ್ ಮಲ್ಲಿಕಾರ್ಜುನ ಶಿಕ್ಷಕ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.ರಾಜ್ಯ ಮಟ್ಟದಲ್ಲೂ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದ್ದಾರೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 