ಜೈಂಟ್ಸ್ ಗ್ರುಪ್ ಹಾಗೂ ಶಿವ ಸಂಜೀವಿನಿ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ
Giants Group and Shiva Sanjeevini Foundation launch free health check-up camp
ಸವದತ್ತಿ 06 : ಆರೋಗ್ಯವೇ ಭಾಗ್ಯ ಎಂಬ ನಾಣ್ಣುಡಿಯಂತೆ, ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಇಂದಿನ ಒತ್ತಡದ ಜೀವನದಲ್ಲಿ ಅತ್ಯಗತ್ಯವಾಗಿದೆ, ಎಂದು ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ಅವರು ಹೇಳಿದರು. ನಗರದ ಕರೀಕಟ್ಟಿ ರಸ್ತೆ ಮಾರ್ಗದ ಚೋಪ್ರಾ ಕಾಲೇಜು ಹತ್ತಿರವಿರುವ ಜೈಂಟ್ಸ್ ಗ್ರುಪ್ ಹಾಗೂ ಶಿವ ಸಂಜೀವಿನಿ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಾಮಾನ್ಯ ಜನರು ಮತ್ತು ಬಡವರು ದುಬಾರಿ ವೈದ್ಯಕೀಯ ವೆಚ್ಚ ಭರಿಸಲಾಗದೆ ರೋಗಗಳನ್ನು ಉಲ್ಬಣಿಸಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಉಚಿತ ಶಿಬಿರಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಆರಂಭಿಕ ಹಂತದಲ್ಲೇ ರೋಗಗಳನ್ನು ಪತ್ತೆ ಹಚ್ಚುವುದರಿಂದ ಮುಂದಾಗುವ ದೊಡ್ಡ ಅನಾಹುತಗಳನ್ನು ತಪ್ಪಿಸಬಹುದು.
ಸಾರ್ವಜನಿಕರು ಇಂತಹ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಜನಸೇವೆಯಲ್ಲಿ ಜೈಂಟ್ಸ್ ಗ್ರುಪ್ ಮತ್ತು ಶಿವ ಸಂಜೀವಿನಿ ಫೌಂಡೇಶನ್ ಮಾಡುತ್ತಿರುವ ಕೆಲಸಗಳು ಇತರರಿಗೆ ಮಾದರಿಯಾಗಿವೆ ಎಂದರು.ನಂತರ ತಾಲೂಕಾಆರೋಗ್ಯಾಧಿಕಾರಿ ಡಾ.ಶ್ರೀಪಾದ ಸಬನಿಸ ಮಾತನಾಡಿ ಅವರು ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ, ಸರ್ಕಾರ ಹಾಗೂ ವಿವಿಧ ಸಂಘ-ಸಂಸ್ಥೆಗಳು ಹಮ್ಮಿಕೊಳ್ಳುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.ಸ್ಥಳೀಯವಾಗಿ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದಲ್ಲಿ ಹೇಳಿದರು.
ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಸಣ್ಣ ವಯಸ್ಸಿನಲ್ಲೇ ಮಧುಮೇಹ ಮತ್ತು ರಕ್ತದೊತ್ತಡದಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಇಂತಹ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ತಪಾಸಣೆ ಮಾಡಿಸಿಕೊಳ್ಳುವುದರಿಂದ ಮುಂದಾಗುವ ದೊಡ್ಡ ಅನಾಹುತಗಳನ್ನು ತಪ್ಪಿಸಬಹುದು ಎಂದು ಅವರು ಎಚ್ಚರಿಸಿದರು.
ತಾಲೂಕಿನಾದ್ಯಂತ ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಸಂಪೂರ್ಣ ಬದ್ಧವಾಗಿದೆ. ಸಾರ್ವಜನಿಕರು ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ, ಸರ್ಕಾರದ ವಿವಿಧ ಆರೋಗ್ಯ ಕಾರ್ಡ್ಗಳ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.ಈ ಆರೋಗ್ಯ ಶಿಬಿರದಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾದ ಹಲವಾರು ತಪಾಸಣೆಗಳನ್ನು ಯಶಸ್ವಿಯಾಗಿ ನಡೆಸಲಾಯಿತು. ಮುಖ್ಯವಾಗಿ ಸಕ್ಕರೆ ಕಾಯಿಲೆ, ಮತ್ತು ರಕ್ತದೊತ್ತಡ, ಕುರಿತು ಉಚಿತ ತಪಾಸಣೆಗಳನ್ನು ನಡೆಸಲಾಯಿತು. ಒಟ್ಟು 140ಕ್ಕೂ ಹೆಚ್ಚು ಜನರು ಈ ಶಿಬಿರದ ಸದುಪಯೋಗ ಪಡೆದುಕೊಂಡರು.
ಡಾ. ಶ್ರೀಪಾದ ಸಬನಿಸ ಮತ್ತು ಅವರ ಪರಿಣಿತ ತಂಡವು ಶಿಬಿರದಲ್ಲಿ ಪಾಲ್ಗೊಂಡು, ಜನರಿಗೆ ಸೂಕ್ತ ವೈದ್ಯಕೀಯ ಸಲಹೆ ಹಾಗೂ ಚಿಕಿತ್ಸೆಯನ್ನು ನೀಡಿದರು.ಇದೇ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತರಾದ ಸಂಗನಬಸಯ್ಯ ಗದಗಿಮಠ, ಪ್ರಮುಖರಾದ ಜಗದೀಶ್ ಹಂಪಣ್ಣವರ, ಪ್ರವೀಣ ಪಟ್ಟಣಶೆಟ್ಟಿ, ಉಮೇಶ ಸರದಾರ, ಮಹಮ್ಮದ್ ಯಲಿಗಾರ, ಜಾವೇದ್ ಪಟಾದ, ಗೀರೀಶ್ ಮುನವಳ್ಳಿ, ಬಸವರಾಜ ಪುಟ್ಟಿ, ಶಂಕರ್ ಇಜಂತಕರ್ ಸೇರಿದಂತೆ ನಗರಸಭೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 