ಭಗತ್ ಸಿಂಗ್, ರಾಜ್ ಗುರು, ಸುಖ್ ದೇವ್ ಗೆ ಭಾರತರತ್ನ ಕೊಡಿ: ತಿವಾರಿ

ನವದೆಹಲಿ,  ಅ 26:   ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜ್ ಗುರು, ಸುಖ್  ದೇವ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಬೇಕೆಂದು  ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಆಗ್ರಹಿಸಿದ್ದಾರೆ.   ಪ್ರಧಾನಿ  ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಮನೀಶ್ ತಿವಾರಿ, ಈ ಮೂವರು ದೇಶಪ್ರೇಮಿಗಳು,  ಹೋರಾಟಗಾರರು ಈ ಪೀಳಿಗೆಗೆ ಸ್ಫೂರ್ತಿಯಾಗಿದ್ದಾರೆ. ಹೀಗಾಗಿ ಮುಂದಿನ ಗಣರಾಜ್ಯ ದಿನದಂದು  ಈ ಮೂವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಬೇಕೆಂದು ಒತ್ತಾಯ ಮಾಡಿದ್ದಾರೆ. ಈ ಹಿಂದೆ ಅಸದುದ್ದೀನ್ ಉವೈಸಿ ಕೂಡಾ ಭಗತ್ ಸಿಂಗ್, ರಾಜ್ ಗುರು, ಸುಖ್ ದೇವ್ ಅವರಿಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿದ್ದರು. ಹಿಂದುತ್ವವಾದಿ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಿರುವ ಸಂದರ್ಭದಲ್ಲೇ ಈ ಬೇಡಿಕೆ ವಿಪಕ್ಷದಿಂದ ಕೇಳಿಬಂದಿದೆ.