ಕೆ.ಎಚ್, ಮುನಿಯಪ್ಪಗೆ ಡಿಸಿಎಂ ಸ್ಥಾನ ನೀಡಿ
Give K.H. Muniyappa the post of DCM.
ಲೋಕದರ್ಶನ ವರದಿ
ಶಿರಹಟ್ಟಿ 01: ಕಳೆದ ಐದು ದಶಕದಿಂದ ಪಕ್ಷ ನಿಷ್ಠೆ ಶಿಸ್ತು, ಬದ್ಧತೆಯಿಂದ ಕೆಲಸ ಮಾಡುತ್ತಿರುವ ಹಿರಿಯ ರಾಜಕಾರಣಿ ಕೆ.ಎಚ್. ಮುನಿಯಪ್ಪ ಅವರಿಗೆ ಈ ಬಾರಿ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಕರ್ನಾಟಕ ಮಾದರ ಮಹಾಸಭಾ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಹುಯಿಲಗೋಳ ಆಗ್ರಹಿಸಿದರು.ಏಳು ಬಾರಿ ಲೋಕಸಭೆಗೆ ಆಯ್ಕೆಯಾಗಿ, ಹತ್ತು ವರ್ಷ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಮುನಿಯಪ್ಪ ಅವರು ರಾಜ್ಯ ರಾಜಕಾರಣಕ್ಕೆ ಬಂದಾಗಿನಿಂದ ಲಕ್ಷಾಂತರ ಮಾದಿಗ ಸಮುದಾಯದವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಕೊಡುತ್ತಿದ್ದಾರೆ. ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ ಅವರಿಗೆ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 