ಲೋಣಿಯವರಿಗೆ ಎಂಎಲ್ಸಿ ಸ್ಥಾನ ನೀಡಿ: ಗಾಣಿಗ ಸಮಾಜದ ಮುಖಂಡರ ಒತ್ತಾಯ
ದೇವರಹಿಪ್ಪರಗಿ 03:ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಲೋಣಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ತಿಗೆ ನಾಮ ನಿರ್ದೇಶನ ಮಾಡಬೇಕು ಎಂದು ತಾಲೂಕು ಗಾಣಿಗ ಸಮಾಜದ ಮುಖಂಡರು ಒತ್ತಾಯಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರದಂದು ತಾಲೂಕು ಗಾಣಿಗ ಸಮಾಜ ಸಂಘದಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಸಂಘದ ತಾಲೂಕು ಅಧ್ಯಕ್ಷರಾದ ವೀರಣ್ಣ ಗಾಣಿಗೇರ್ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಒಬ್ಬ ಅತ್ಯುತ್ತಮ ಸಂಘಟಕರಾಗಿದ್ದು, ಈ ಹಿಂದೆ ಜಿಲ್ಲಾ ಪಂಚಾಯತ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಹಾಗೂ ಪ್ರಸ್ತುತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷದ ಬಲವರ್ಧನೆಗೆ ತಮ್ಮದೇ ರೀತಿಯಲ್ಲಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಈ ಹಿಂದೆ ಲೋಣಿಯವರು ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತರಾದಾಗ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬೆರಳಣಿಕೆ ಮತಗಳಿಂದ ಪರಭಾವಗೊಂಡರೂ ತೀವ್ರ ಸ್ಪರ್ಧೆ ನೀಡಿ ತಮ್ಮ ಸಾಮರ್ಥ್ಯ ಸಾಭೀತುಪಡಿಸಿದ್ದರು. ತದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಎಂಎಲ್ಸಿ ಸುನೀಲಗೌಡ ಪಾಟೀಲ ಹಾಗೂ ಇನ್ನಿತರ ಕಾಂಗ್ರೆಸ್ ನಾಯಕರು ಅವರನ್ನು ಸಿಎಂ, ಡಿಸಿಎಂ ಸಮ್ಮುಖದಲ್ಲಿ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ವೇಳೆ ಮಲ್ಲಿಕಾರ್ಜುನ ಲೋಣಿ ಅವರಿಗೆ ಎಂಎಲ್ಸಿ ಸ್ಥಾನದಂತಹ ಉತ್ತಮ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು. ಈಗ ಆ ಸಮಯ ಕೂಡಿ ಬಂದಿದೆ. ರಾಜ್ಯದಲ್ಲಿ ವಿಧಾನ ಪರಿಷತ್ ನಾಮನಿರ್ದೇಶನ ಚಟುವಟಿಕೆಗಳು ನಡೆದಿದ್ದು, ಗಾಣಿಗ ಸಮಾಜದ ರಾಜ್ಯಾಧ್ಯಕ್ಷರು ಆಗಿರುವ ಮಲ್ಲಿಕಾರ್ಜುನ ಲೋಣಿಯವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಮೂಲಕ ಬಹುಸಂಖ್ಯಾತ ಗಾಣಿಗ ಸಮಾಜಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ದೇವರ ಹಿಪ್ಪರಗಿ ತಾಲೂಕ ಗಾಣಿಗ ಸಮಾಜದ ಪ್ರಧಾನ ಕಾರ್ಯದರ್ಶಿಗಳಾದ ಬಾಬುಗೌಡ ಏಳುಕೋಟಿ. ಮುಖಂಡರುಗಳಾದ ಶಿವಕುಮಾರ್ ಚೆನ್ನಬಸಪ್ಪ ಗೊಬ್ಬೂರು. ಪ್ರಕಾಶ್ ಕರಬಂಟನಾಳ, ಸಿದ್ದನಗೌಡ ಪಾಟೀಲ್. ಸಂತೋಷ್ ಏಳು ಕೋಟಿ. ಸಿದ್ಧಾರೂಢ ದೇಶುಣಗಿ. ಬಸವರಾಜ ಹಗರಟಗಿ. ಪರಶುರಾಮ ಗುನ್ನಾಪುರ. ಮಲ್ಲಿಕಾರ್ಜುನ್ ಬಿಜಾಪುರ್. ಸಂಗನಗೌಡ ಪಾಟೀಲ್ ಕೆರೂಟಗಿ. ಎಸ್. ಜೆ ಪಾಟೀಲ್. ಗುರುನಾಥ್ ಸಜ್ಜನ್. ಸುಭಾಷ್ ಸಜ್ಜನ್. ವಿಠ್ಠಲ್ ಯಂಕಂಚಿ. ನಿಂಗು ಬಿರಾದಾರ್. ಕೊಂಡಗೂಳಿ ಪಿಕೆಪಿಎಸ್ ಅಧ್ಯಕ್ಷರಾದ ಜಗದೀಶ್ ಪಾಟೀಲ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತಿರಿದ್ದರು.