ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ.ಉಪ್ಪಾರ ಸಮುದಾಯ ಆಗ್ರಹ
Give MLA C. Puttarangashetty a place in the cabinet. Uppara community demands
ಲೋಕದರ್ಶನ ವರದಿ
ಕಂಪ್ಲಿ 29 : ರಾಜ್ಯದಲ್ಲಿ ಉಪ್ಪಾರ ಸಮಾಜಕ್ಕೆ ಸಮರ್ಕ ರಾಜಕೀಯ ಪ್ರತಿನಿಧಿತ್ವ ದೊರಕಬೇಕಾದರೆ ಉಪ್ಪಾರ ಸಮಾಜದ ಏಕೈಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು' ಎಂದು ತಾಲೂಕು ಭಗೀರಥ ಉಪ್ಪಾರ ಸಮಾಜ ಅಧ್ಯಕ್ಷ ಯು.ನಾಗರಾಜ ಆಗ್ರಹಿಸಿದರು.ಪಟ್ಟಣದ ಐತಿಹಾಸಿಕ ಸೋಮೇಶ್ವರ ದೇವಸ್ಥಾನ ಬಳಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ. ಪುಟ್ಟರಂಗಶೆಟ್ಟಿ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿದ್ದು, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಸುಮಾರು 30 ರಿಂದ 40 ಲಕ್ಷ ಉಪ್ಪಾರ ಸಮಾಜದ ಜನಸಂಖ್ಯೆ ಇದ್ದು, ಸಮಾಜಕ್ಕೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ'. ಉಪ್ಪಾರ ಸಮಾಜವು ಕಾಂಗ್ರೆಸ್ ಪಕ್ಷಕ್ಕೆ ಸದಾ ಬೆಂಬಲ ನೀಡುತ್ತಾ ಬಂದಿದ್ದು, ಇದೀಗ ಸಮಾಜದ ಆಶಯಕ್ಕೆ ಸ್ಪಂದಿಸಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮಾಜಕ್ಕೆ ನ್ಯಾಯ ಒದಗಿಸಬೇಕು' ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಉಪಾಧ್ಯಕ್ಷ ಯು.ವೆಂಕಟೇಶ, ಪ್ರಧಾನ ಕಾರ್ಯದರ್ಶಿ ಕೆ.ಗೋವಿಂದಪ್ಪ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 