ಮುಂಬೈ,ಆ 22 ನಿಗದತಿ ಓವರ್ಗಳ ಮಾದರಿಯಲ್ಲಿ ಆರಂಭಿಕ ಬ್ಯಾಟ್ಸ್ಮನ್ ಆಗಿ ಯಶಸ್ವಿಯಾಗಿರುವ ರೋಹಿತ್ ಶರ್ಮಾ ಅವರನ್ನೇ ಟೆಸ್ಟ್ ಮಾದರಿಯಲ್ಲೂ ಆರಂಭಿಕನಾಗಿ ಆಡುವ ಅವಕಾಶ ನಿಡಬೇಕೆಂದು ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಸಲಹೆ ನೀಡಿದ್ದಾರೆ.
32ರ ಪ್ರಾಯದ ರೋಹಿತ್ ಶರ್ಮಾ ಅವರು ಟಿ-20 ಹಾಗೂ ಏಕದಿನ ಮಾದರಿಯಲ್ಲಿ ಆರಂಭಿಕ ಬ್ಯಾಟ್ಸ್ಮನ್ ಆಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಅಲ್ಲದೇ, ಇಂಗ್ಲೆಂಡ್ ಹಾಗೂ ವೇಲ್ಸ್ನಲ್ಲಿ ಇತ್ತೀಚೆಗೆ ಮುಕ್ತಾಯವಾಗಿದ್ದ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ರನ್ ಹೊಳೆ ಹರಿಸಿದ್ದರು.
ರೋಹಿತ್ ಶರ್ಮಾ ಏಕದಿನ ಮಾದರಿಯಲ್ಲಿ ಮೂರು ಬಾರಿ ದ್ವಿಶತಕ ಸಿಡಿಸಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಆಗಿದ್ದಾರೆ. ಆದರೆ, ಟೆಸ್ಟ್ ಕ್ರಿಕೆಟ್ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಿದ್ದ ರೋಹಿತ್ ಇನ್ನೂ ಯಶ ಕಂಡುಕೊಂಡಿಲ್ಲ.
ಕಳೆದ ವರ್ಷ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ತಂಡಕ್ಕೆ ಮರಳಿದ್ದ ರೋಹಿತ್ ನಾಲ್ಕು ಇನಿಂಗ್ಸ್ಗಳಲ್ಲಿ ಕೇವಲ 78 ರನ್ ಗಳಿಸಿದ್ದರು.
ರೋಹಿತ್ ಶರ್ಮಾ ಅವರು ಕಳೆದ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಲಯದಲ್ಲಿದ್ದರು. ಇದೀಗ ಅದೇ ಲಯವನ್ನು ಮುಂದುವರಿಸುವ ಸಾಧ್ಯತೆ ಇದೆ. ಹಾಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲನೇ ಪಂದ್ಯದಲ್ಲಿ ಅವರನ್ನು ಆರಂಭಿಕ ಬ್ಯಾಟ್ಸ್ಮನ್ ಆಗಿ ಆಡಿಸಬೇಕೆಂದು ಎಂದು ಗಂಗೂಲಿ ಸಲಹೆ ನೀಡಿದ್ದಾರೆ.