ಕೊಪ್ಪಳ 22: ಮಾನಸಿಕ ಅಸ್ವಸ್ಥರ ಕುಟುಂಬಕ್ಕೆ ಉದ್ಯೋಗದ ಅವಕಾಶವನ್ನು ನೀಡುವಂತೆ ರಾಜ್ಯ ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ರಾಜ್ಯ ಆಯುಕ್ತರಾದ ವಿ.ಎಸ್. ಬಸವರಾಜು ಅವರು ಹೇಳಿದರು.
ಇಂದು (ನ.22) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ವಿಕಲಚೇತನರ ಕಾರ್ಯಕ್ರಮಗಳ ಅನುಷ್ಠಾನದ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾಯ್ದೆಯನ್ವಯ ಸರ್ಕಾರದ ವಿವಿಧ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ಗಳಲ್ಲಿ ವಿಕಲಚೇತನರ ಅಭಿವೃದ್ಧಿಗಾಗಿ ಶೇ.5 ರಷ್ಟು ಅನುದಾನವನ್ನು ಕಾಯ್ದಿರಿಸಲಾಗಿದೆ. ಈ ಅನುದಾನವು ಸದ್ಬಳಕೆಯಾಗಬೇಕು. ಅಂಗವಿಕಲರಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸಕರ್ಾರಗಳು ನೀಡುವ ಅನುದಾನವನ್ನು ಕೇವಲ ಯಂತ್ರ ಚಾಲಿತ ತ್ರಿಚಕ್ರ ವಾಹನಗಳನ್ನು ನೀಡಲು ಮಾತ್ರ ಸಿಮಿತವಾಗಬಾರದು. ಈ ಅನುದಾನವನ್ನು ಅಂಗವಿಕಲರ ಶಿಕ್ಷಣ, ಸ್ವ-ಉದ್ಯೋಗ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆಯಾಗಬೇಕು. ಯಾವುದೇ ವಿಕಲಚೇತನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಸರ್ಕಾರಗಳು ಅವರಿಗೆ ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ. ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಕರ್ಯವನ್ನು ಒದಗಿಸಬೇಕು. ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಒಂದು ಪಾಕರ್್ ಮತ್ತು ಒಂದು ಆಟದ ಮೈದಾನವನ್ನು ಸ್ಥಾಪಿಸಲು ಸೂಕ್ತ ಕ್ರಮ ವಹಿಸಬೇಕು. ಅಲ್ಲದೇ ತಮ್ಮಿಂದ ಅಂಗವಿಕಲರಿಗೆ ನೀಡುವ ಪ್ರೋತ್ಸಾಹಧನ ಹಾಗೂ ವಿವಿಧ ಯೋಜನೆಗಳ ಸೌಲಭ್ಯವನ್ನು ಸಮರ್ಪಕವಾಗಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಿರುದ್ಯೋಗಿ ವಿಕಲಚೇತನರಿಗೆ ಸ್ವಯಂ ಉದ್ಯೋಕ್ಕಾಗಿ ಸಾಲ ಸೌಲಭ್ಯ, ವಿಕಲಚೇತನರು ಕ್ರೀಡೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಲು ಕ್ರಮ, ಶಿಶುಕೇಂದ್ರೀಕೃತ ಯೋಜನೆಯಡಿ ಅಂಧ, ಶ್ರವಣನ್ಯೂನತೆ ಹಾಗೂ ಬುದ್ದಿಮಾಂದ್ಯ ಮಕ್ಕಳಿಗೆ ವಸತಿಯುತ ವಿಶೇಷ ಶಿಕ್ಷಣವನ್ನು ಒದಗಿಸಬೇಕು. ಅಂಗವಿಕಲರ ವ್ಯಕ್ತಿಗಳ ಅಧಿನಿಯಮ 2016ರ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ಕ್ರಮ ಕೈಗೊಂಡು ಜನರಿಗೆ ತರಬೇತಿ ನೀಡಬೇಕು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿರುವ ನಿರುದ್ಯೋಗಿ ವಿಕಲಚೇತನರಿಗೆ ಕೌಶಲ್ಯ ತರಬೇತಿಯನ್ನು ನೀಡಿ, ಉದ್ಯೋಗದ ನೆರವನ್ನು ಕಲ್ಪಿಸಿ.
ಸಭೆಯಲ್ಲಿ ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಸಹಾಯಕ ಆಯುಕ್ತರಾದ ಎಸ್.ಕೆ. ಪದ್ಮನಾಭವ, ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ನೇಹಾ ಜೈನ್, ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ಸಿದ್ದರಾಶ್ವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ದಾನರೆಡ್ಡಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಜಂಬಯ್ಯ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಡಿ.ಎನ್. ಮೂಲಿಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಯಶ್ರೀ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.