ಹೃದಯ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಿ: ಡಾ.ಎಸ್‌.ಎಸ್ ಅಯ್ಯಂಗಾರ್‌

Give high priority to heart care: Dr SS Iyengar

ಹೃದಯ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಿ: ಡಾ.ಎಸ್‌.ಎಸ್ ಅಯ್ಯಂಗಾರ್‌

ಬಳ್ಳಾರಿ 04:ಮನುಷ್ಯನ ಆವಯವಗಳಲ್ಲಿ ಹೃದಯದ ಪಾತ್ರ ಅತ್ಯಂತ ಪ್ರಮುಖವಾಗಿದೆ. ಹೃದಯದ ಆರೈಕೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸದೃಢ ಆರೋಗ್ಯ ಹೊಂದಬೇಕು ಎಂದು ಹಿರಿಯ ಹೃದಯ ತಜ್ಞರು ಹಾಗೂ ನಿವೃತ್ತ ವಿಂಗ್ ಕಮಾಂಡರ್ ಡಾ.ಎಸ್‌.ಎಸ್ ಅಯ್ಯಂಗಾರ್ ಅವರು ತಿಳಿಸಿದರು.ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮಗಳಲ್ಲೊಂದಾದ ಡಾ.ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯ ಅಂಗವಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ವಿಭಾಗ ಮತ್ತು ಟ್ರೈಕಾಗ್ ಸಂಸ್ಥೆಯ ಸಹಕಾರದೊಂದಿಗೆ ಹೃದಯ ಕಾಯಿಲೆ ಆರಂಭದಲ್ಲಿಯೇ ಗುರ್ತಿಸಲು ಬಳ್ಳಾರಿ ಹಬ್ ಒಳಗೊಂಡಂತೆ ಸಿರುಗುಪ್ಪ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಹೊಸಪೇಟೆ, ಕುಷ್ಟಗಿ, ಯಲಬುರ್ಗಾ ಸಾರ್ವಜನಿಕ ಆಸ್ಪತ್ರೆಗಳ ತಜ್ಞ ವೈದ್ಯರು ಹಾಗೂ ಸಿಬ್ಬಂದಿಯವರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಹೃದಯ ಸಂಬಂಧಿತ ಯಾವುದೇ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡದೇ ತಕ್ಷಣ ವೈದ್ಯಕೀಯ ಉಪಚಾರ ಪಡೆಯಬೇಕು. ಆರೋಗ್ಯವಂತ ಹೃದಯ ಕಾಪಾಡಿಕೊಂಡು ದೀರ್ಘಾಯುಷ್ಯ ಹೊಂದಲು ಜನತೆಗೆ ಕಾಳಜಿ ತೆಗೆದುಕೊಳ್ಳುವುದರ ಕುರಿತು ಜಾಗ್ರತೆ ನೀಡಬೇಕು ಎಂದರು.ಹೃದಯ ಸಂಬಂಧಿತ ಕಾಯಿಲೆಗಳ ಲಕ್ಷಣಗಳಾಗಿರುವ ನಿದ್ರಾಭಂಗ, ತೀವ್ರ ಉಸಿರಾಟದ ತೊಂದರೆ, ಬೆನ್ನು ಅಥವಾ ದೇಹದ ಮೇಲ್ಭಾಗದಲ್ಲಿ ಅಸ್ವಸ್ಥತೆ ಎಡಗೈ ಸೇದುವುದು, ಕಾರಣವಿಲ್ಲದೆ ಬೆವುರುವುದು, ವಾಕರಿಕೆ, ವಾಂತಿ ಮುಂತಾದವು ಕಂಡುಬಂದಲ್ಲಿ ಅಂತಹ ವ್ಯಕ್ತಿಗಳಿಗೆ ಆಸ್ಪತ್ರೆಗೆ ದಾಖಲಿಸುವ ಕುರಿತು ತಿಳಿ ಹೇಳಬೇಕು. ಬಳ್ಳಾರಿ ಹೃದಯಾಲಯ ಹಬ್ ಆಸ್ಪತ್ರೆಗೆ ತಕ್ಷಣವೇ ವೈದ್ಯಕೀಯ ಉಪಚಾರದೊಂದಿಗೆ ಕಳುಹಿಸುವ ಕಾರ್ಯ ಮಾಡಬೇಕು ಎಂದರು.ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ ಅವರು ಮಾತನಾಡಿ, ಹೃದಯಘಾತ ಹಾಗೂ ಹೃದಯ ಸಂಬಂಧಿ ಇತರೆ ಕಾಯಿಲೆಗಳನ್ನು ಗ್ರಾಮೀಣ ಭಾಗದಲ್ಲಿಯೇ ಗುರ್ತಿಸಿ ಚಿಕಿತ್ಸೆ ನೀಡುವ ಮೂಲಕ ವ್ಯಕ್ತಿಯನ್ನು ಉಳಿಸುವ ಮೂಲಕ ಕುಟುಂಬದ ಸಂತಸ ಸದಾ ಇರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.ಡಾ.ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಸಾರ್ವಜನಿಕ ಆಸ್ಪತ್ರೆ ಆಯ್ಕೆಯಾಗಿದ್ದು, ಮುಂದಿನ ಹಂತದಲ್ಲಿ ರಾಜ್ಯ ಸರ್ಕಾರವು ಇತರೆ ತಾಲ್ಲೂಕಗಳನ್ನು ಒಳಪಡಿಸುತ್ತಿದೆ ಎಂದು ತಿಳಿಸಿದರು. 

ಯಾವುದೇ ಕಠಿಣ ಸಂದರ್ಭದಲ್ಲಿ ಸ್ಟಂಟ್ ಹಾಕುವ, ಅಗತ್ಯವಿದ್ದಲ್ಲಿ ಹೃದಯ ಶಸ್ತ್ರಚಿಕಿತ್ಸೆ ಕೈಗೊಳ್ಳುವ ಮೂಲಕ ವ್ಯಕ್ತಿಯ ಹೃದಯಕ್ಕೆ ರಕ್ತ ಸಂಚಾರ ಸರಾಗವಾಗಿ ನೆರವೇರಿಸುವ ಮೂಲಕ ಕಡುಬಡ ಕುಟಂಬಗಳಿಗೆ ಆಸರೆಯಾಗಿ ಯೋಜನೆ ಅನುಷ್ಟಾನವಾಗುತ್ತಿದ್ದು, ಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿನಂತಿಸಿದರು.ಕಾರ್ಯಾಗಾರದಲ್ಲಿ ಹಿರಿಯ ಹೃದಯ ತಜ್ಞರಾದ  ಡಾ.ಸಿ.ಬಿ ಪಾಟೀಲ್, ಡಾ.ಮಧು ಜುಮ್ಲಾ ತರಬೇತಿ ನೀಡಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಎನ್‌ಸಿಡಿ ಸಲಹೆಗಾರರಾದ ಡಾ.ಜಬೀನಾ ತಾಜ್, ಹೃದಯ ಜ್ಯೋತಿ (ಟ್ರೈಕಾಗ್) ಯೋಜನೆಯ ವ್ಯವಸ್ಥಾಪಕ ಗೌತಮ್ ಸತ್ಯಪ್ರೇಮ್ ಹಾಗೂ ಶೃತಿ, ಹನುಮಂತು, ಪ್ರದೀಪ್, ರವಿಕುಮಾರ್, ವಿಜಯಮಾಳಿ ಸೇರಿದಂತೆ ಮೂರು ಜಿಲ್ಲೆಯ ತಜ್ಞ ವೈದ್ಯರು ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು. 

ಯುವ ಸಮುದಾಯ ಕ್ರಿಯಾಶೀಲ ಮನೋಭಾವ, ಸ್ಪರ್ಧಾತ್ಮಕ ಮನಸ್ಸು ಹಾಗೂ ನಿರಂತರ ಪ್ರಯತ್ನದಿಂದ ಬದುಕು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. 

ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಬದುಕಿನಲ್ಲಿ ಉತ್ತಮ ಸಾಧಕರಾಗಲು ಕಠಿಣ ಪರಿಶ್ರಮ, ಸಂವಹನ ಕಲೆ, ಭಾಷೆಯ ಮೇಲೆ ಉತ್ತಮ ಹಿಡಿತ ಮತ್ತು ಸಾಧಿಸುವ ಗುಣಗಳನ್ನು ಮೈಗೂಡಿಸಿಕೊಳ್ಳುವುದು ಅವಶ್ಯಕವೆಂದು ತಿಳಿಸಿದರು. 

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಾಣೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ನಿರುದ್ಯೋಗಿ ಯುವಕ ಯುವತಿಯರಿಗೆ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡಿ ಉದ್ಯೋಗ ಮೇಳಗಳನ್ನು ಆಯೋಜಿಸುವ ಮೂಲಕ ಉದ್ಯೋಗ ಪಡೆಯಲು ಅವಕಾಶ ಕಲ್ಪಿಸಿಕೊಡುವುದು ಇಲಾಖೆಯ ಉದ್ದೇಶವಾಗಿದ್ದು, ಉದ್ಯೋಗ ಮೇಳದಲ್ಲಿ ಭಾಗವಹಿಸಿದ ಎಲ್ಲಾ ಯುವಕ ಯುವತಿಯರು ಸದುಪಯೋಗಪಡಿಸಿಕೊಳ್ಳಲು ತಿಳಿಸಿದರು. 

ಈ ವೇಳೆ ಸಸಅ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮೋನಿಕಾ ರಂಜನ್, ಉದ್ಯೋಗಾಧಿಕಾರಿ ಹಟ್ಟಪ್ಪ, ಸಹಾಯಕ ನಿರ್ದೇಶಕ ವಿಶ್ವನಾಥ್, ಸಹಾಯಕ ಸಾಂಖ್ಯಿಕ ಅಧಿಕಾರಿಗಳಾದ ಚಂದ್ರಮ್ಮ, ಜಿಲ್ಲಾ ಅಭಿಯಾನ ವ್ಯವಸ್ಥಾಪಕ ಪ್ರಾಣೇಶ್, ದೇವರಾಜ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. 

ಉದ್ಯೋಗ ಮೇಳದಲ್ಲಿ ಒಟ್ಟು 41 ಉದ್ಯೋಗದಾತರು ಭಾಗವಹಿಸಿದ್ದರು. ನೋಂದಣಿಯಾದ ಸುಮಾರು 2634 ಅಭ್ಯರ್ಥಿಗಳಲ್ಲಿ 1695 ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಹಾಜರಾಗಿದ್ದರು. ಈ ಪೈಕಿ, 343 ಅಭ್ಯರ್ಥಿಗಳು ಆಯ್ಕೆಗೊಂಡಿದ್ದು, 781 ಅಭ್ಯರ್ಥಿಗಳನ್ನು ಕಾಯ್ದಿರಿಸಲಾಗಿದೆ.