ಸವದಿ ಹಾಗೂ ಪಾಟೀಲ ಗೆ ಸಚಿವ ಸ್ಥಾನ ನೀಡಿ: ಸುಭಾಷ್ ಹಿಟ್ನಳ್ಳಿ
Give ministerial positions to Savadi and Patil: Subhash Hitnalli
ಲೋಕದರ್ಶನ ವರದಿ
ಇಂಡಿ 10: ಉತ್ತರಕರ್ನಾಟಕ ಭಾಗದ ಗಾಣಿಗ ಸಮಾಜದ ಪ್ರಭಾವಿ ರಾಜಕಾರಣಿ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ, ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಹಾಗೂ ಇಂಡಿ ಮತಕ್ಷೇತ್ರದ ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರಿಗೆ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಇಂಡಿ ತಾಲ್ಲೂಕು ಗಾಣಿಗ ಸಮಾಜ ಮುಖಂಡರಾದ ಸುಭಾಷ್ ಹಿಟ್ನಳ್ಳಿ ಅವರು ಆಗ್ರಹಿಸಿದರು. ಅವರು ಬುಧವಾರ ನಗರದ ಅಮರ್ ಇಂಟರ್ನ್ಯಾಷನಲ್ ಹೋಟೆಲ್ ಆವರಣದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು 2023 ರ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರದ ಮುಖಂಡರಾದ ಸಿದ್ಧರಾಮಯ್ಯ, ಡಿ.ಕೆ.ಶಿವಕುಮಾರ ಅವರು ಲಕ್ಷ್ಮಣ ಸವದಿಯವರಿಗೆ ಸಚಿವ ಸ್ಥಾನ ನೀಡುವ ಆಶ್ವಾಸನೆ ನೀಡಿದ್ದರು.
ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳಲಿಲ್ಲ. ಸಚಿವ ಸ್ಥಾನ ನೀಡದೇ ವಂಚಿಸಿದ ಕಾಂಗ್ರೆಸ್ ಹೈಕಮಾಂಡ್ ವಿರುದ್ದ ಸಮಸ್ತ ಗಾಣಿಗ ಸಮುದಾಯ ರೊಚ್ಚಿಗೆದ್ದಿದ್ದಾರೆ. ಮುಂಬರುವ ಎರಡು ವರ್ಷದ ಅವಧಿಯಲ್ಲಾದರೂ ಸವದಿಯವರಿಗೆ ಸಚಿವ ಸ್ಥಾನ ನೀಡದಿದ್ದರೆ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಹೇಳಿದರು.ಹಾಗೂ ಇಂಡಿ ಮತಕ್ಷೇತ್ರಕ್ಕೆ ಸ್ವಾತಂತ್ರ್ಯ ಸಿಕ್ಕು 78 ವರ್ಷಗಳಾದರೂ ಕೂಡಾ ಇಂಡಿ ಮತಕ್ಷೇತ್ರದದಿಂದ ಯಾರು ಸಚಿವರು ಆಗಿಲ್ಲ,ಈ ಬಾರಿ ಆದರೂ ಕೂಡಾ ಯಶವಂತರಾಯಗೌಡ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು ಪತ್ರಿಕಾಗೋಷ್ಠಿಯಲ್ಲಿ ಎ .ಎಸ್. ಗಾಣಿಗೇರ, ಅಪ್ಪು ಕಲ್ಲೂರ, ಬಿ.ಎಸ್ ಅವಜಿ, ಮಲಕಣ್ಣ ಜಂಬಿಗಿ, ಭೀಮನಗೌಡ ಪಾಟೀಲ, ಪ್ರದೀಪ ಉಟಗಿ, ಶಂಕರ್ ಏಳುಕೋಟಿ, ಸಿ.ಎಸ್ ಪಾಸೋಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 