ಉತ್ತರ ಕರ್ನಾಟಕದ ಪಂಚಮ ಸಾಲಿಗರಿಗೆ ಸಚಿವ ಸ್ಥಾನ ನೀಡಿ - ಡಾ.ಎ.ಆರ್.ಬೆಳಗಲಿ ಆಗ್ರಹ
Give ministerial positions to the fifth salari of North Karnataka - Dr. A.R. Belagali demands
ಲೋಕದರ್ಶನ ವರದಿ
ಮಹಾಲಿಂಗಪುರ 18 : ಉತ್ತರ ಕರ್ನಾಟಕ ಭಾಗದ ಪಂಚಮಸಾಲಿ ಸಮಾಜದ ರಾಜಕಾರಣಿಗಳಿಗೆ ಕಾಂಗ್ರೆಸ್ ಪಕ್ಷದ ನೂತನ ಸರ್ಕಾರದ ಎರಡನೇ ಹಂತ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಚಿವ ಸ್ಥಾನ ನೀಡಿ ಸಮಾಜಕ್ಕೆ ಆದ್ಯತೆ ನೀಡಬೇಕೆಂದು ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ಡಾ.ಎ.ಆರ್.ಬೆಳಗಲಿ ಪಕ್ಷದ ವರಿಷ್ಠರನ್ನು ಹಾಗೂ ಸಿಎಂ ಡಿಕೆ ಶಿವಕುಮಾರ್ ಅವರನ್ನು ಆಗ್ರಹಿಸಿದ್ದಾರೆ.
ಗುರುವಾರ ಪತ್ರಿಕೆಗೆ ವಿಷಯ ತಿಳಿಸಿ ಮಾತನಾಡಿದ ಅವರು, ಮಾಜಿ ಸಚಿವ ಹಾಲಿ ಶಾಸಕರಾಗಿರುವ ಶಿವಾನಂದ ಪಾಟೀಲ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಾಸಕ ವಿಜಯಾನಂದ ಕಾಷಪ್ಪನ್ನವರ ಇವರು ಎಲ್ಲ ವರ್ಗಗಳ ಮತ್ತು ಪಕ್ಷದ ಹಿತಾಸಕ್ತಿಯ ರಕ್ಷಣೆಗೆ ಕಟಿಬದ್ಧರಾಗಿ ರಾಜಕಾರಣದಲ್ಲಿ ಸಕ್ರಿಯರಾಗಿ,ತಮ್ಮ ತಮ್ಮ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶಗಳನ್ನು ಒದಗಿಸುವಲ್ಲಿಯೂ ಯಶಸ್ಸು ಕಂಡವರು.
ಪ್ರಸ್ತುತ ಶಾಸಕ ಸ್ಥಾನದಲ್ಲಿರುವ ಶಿವಾನಂದ ಪಾಟೀಲ್ 1991 ರಿಂದ ತಿಕೋಟಾ ವಿಧಾನಸಭೆ ಕ್ಷೇತ್ರದಿಂದ ರಾಜಕಾರಣ ಆರಂಭಿಸಿ, ಕಾಂಗ್ರೆಸ್ ನಿಂದ 2004,2008,2013 ಮತ್ತು 2018ರಲ್ಲಿ ಬಸವನ ಬಾಗೇವಾಡಿ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿ, ಶಾಸಕರಾಗಿ, ಕೆಲವು ಇಲಾಖೆಗಳಲ್ಲಿ ಸಚಿವರಾಗಿಯೂ ರಾಜ್ಯದ ಜನತೆಯ ಸೇವೆ ಮಾಡಿದ ಅನುಭವವನ್ನು ಹೊಂದಿರುವ ರಾಜಕಾರಣಿಯಾಗಿದ್ದಾರೆ.
ಇನ್ನೋರ್ವ ರಾಜಕಾರಣಿ ಶಾಸಕ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರದಿಂದ 2013 ಹಾಗೂ 2023 ರಲ್ಲಿ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗಿ ಹುನಗುಂದ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ಮತ್ತು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕವಾಗಿ ಉತ್ತಮ ಕೆಲಸ ಮಾಡಿ ಎಲ್ಲ ವರ್ಗಗಳ ಜನರ ವಿಶ್ವಾಸವನ್ನು ಗಳಿಸಿ ಕಾಂಗ್ರೆಸ್ ಪಕ್ಷದ ಭದ್ರ ಬುನಾದಿಗೆ ನಾಂದಿ ಹಾಡಿದವರು. ಇವರು ತಮ್ಮ ತಂದೆಯ ಹಾದಿಯಲ್ಲಿಯೇ ಪಾರದರ್ಶಕವಾಗಿ ಆಡಳಿತ ನಡೆಸುತ್ತ ಜನಮಾನಸದಲ್ಲಿ ತಮ್ಮ ಸ್ಥಾನವನ್ನು ಸುಭದ್ರಗೊಳಿಸಿಕ್ಕೊಂಡು ಕಾಂಗ್ರೆಸ್ ಪಕ್ಷದ ಪ್ರಮುಖರಲ್ಲಿ ಒಬ್ಬರೆನಿಮಿಸಿದ್ದಾರೆ.
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ 2018 ರಲ್ಲಿ ಬೆಳಗಾವಿ ಗ್ರಾಮಾಂತರದಿಂದ ವಿಧಾನಸಭೆಗೆ ಆಯ್ಕೆಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳಲ್ಲಿ ಸಚಿವರಾಗಿ ಅನುಭವ ಪಡೆದರೆ,ಇನ್ನು ಗಣೇಶ ಹುಕ್ಕೇರಿ ಕರ್ನಾಟಕ ವಿಧಾನಸಭೆಗೆ ಮೂರು ಬಾರಿ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ವರ್ಚಸ್ಸನ್ನು ಕಾಯ್ದುಕೊಂಡು ಬಂದಿದ್ದಾರೆ.
ಅವರು 2023 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿಂದ ವಿಜೇತರಾಗಿ ಸಾಕಷ್ಟು ಪಕ್ಷದ ಜನಪರ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ಮುಟ್ಟುವಂತೆ ನೋಡಿಕ್ಕೊಂಡು ಬಂದಿರುವುದರಿಂದಲೇ ಈ ಭಾಗದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠ ಎನಿಸಿದೆ.ಆದ್ದರಿಂದ ಭವಿಷ್ಯದಲ್ಲಿಯೂ ಧನಾತ್ಮಕ ಮತಗಳು ಪಕ್ಷಕ್ಕೆ ವರದಾನವಾಗಲಿವೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಪಂಚಮಸಾಲಿ ಶಾಸಕರಿಗೆ ಆದ್ಯತೆ ನೀಡಲು ನಾನು ಪಂಚಮಸಾಲಿ ಅಧ್ಯಕ್ಷನಾಗಿ (ಡಾ.ಎ.ಆರ್.ಬೆಳಗಲಿ) ಕಾಂಗ್ರೆಸ್ ವರಿಷ್ಠರಲ್ಲಿ ಮತ್ತೊಮ್ಮೆ ವಿನಂತಿಸಿಕ್ಕೊಳ್ಳುತ್ತೇನೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 