ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸಮಯ ನೀಡಿ:ಡಾ.ಪ್ರಭುಗೌಡ
Give time for the all-round development of children: Dr. Prabhugowda
ದೇವರಹಿಪ್ಪರಗಿ 07: ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣದ ಜತೆಗೆ ಸ್ಪರ್ಧಾತ್ಮಕ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು ಎಂದು ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಮುಖ್ಯಸ್ಥರು ಹಾಗೂ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ ಪ್ರಭುಗೌಡ ಲಿಂಗದಳ್ಳಿ (ಚಬನೂರ) ಹೇಳಿದರು.ಸಮೀಪದ ಜಾಲವಾದ ಗ್ರಾಮದ ಶ್ರೀ ಮಹಾಂತಲಿಂಗ ಶಿವಾಚಾರ್ಯ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಹಾಗೂ ವಿದ್ಯಾ ಭಾರತಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 22ನೇ ವಾರ್ಷಿಕ ಸ್ನೇಹ ಸಮ್ಮೇಳನ,5ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪಾಲಕರು ಮಕ್ಕಳ ಶೈಕ್ಷಣಿಕ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಸಮಯ ಮೀಸಲಿಡಬೇಕು.
ಮಕ್ಕಳ ಪ್ರತಿಭೆ ಪ್ರದರ್ಶಿಸಲು, ಸೃಜನಶೀಲತೆ ಉತ್ತೇಜಿಸಲು ಇಂಥ ಕಾರ್ಯಕ್ರಮಗಳು ಸಹಕಾರಿ, ಪ್ರತಿ ಮಗುವಿನಲ್ಲಿ ಒಂದಿಲ್ಲ ಒಂದು ಸೂಪ್ತ ಶಕ್ತಿ ಅಡಗಿರುತ್ತದೆ, ಯಾವ ಮಗುವೂ ಕೂಡ ದಡ್ಡರಲ್ಲ ಅದನ್ನು ಹೊರಗಡೆಡುವ ಶಕ್ತಿ ಶಿಕ್ಷಕರಲ್ಲಿದೆ. ಶಿಕ್ಷಣದ ಜೊತೆ ಸಂಸ್ಕಾರ ನೀಡುವಲ್ಲಿ ವಿದ್ಯಾಭಾರತಿ ಶಾಲೆ ದಾರೀದೀಪವಾಗಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಪಂ ಉಪಾಧ್ಯಕ್ಷರಾದ ಮಾಳಪ್ಪ ಚಿತ್ತಾಪುರ, ಫೋಟೋ ಪೂಜೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಲ್ಲಯ್ಯ ನಂದಿಕೋಲ ನೆರವೇರಿಸಿದರು.ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಬಿಜೆಪಿ ಒಬಿಸಿ ಯುವ ಘಟಕದ ರಾಜ್ಯಾಧ್ಯಕ್ಷರಾದ ವಿವೇಕಾನಂದ ಡಬ್ಬಿ ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಮಹಾಂತೇಶ ವಡಗೇರಿ, ದೇವರಹಿಪ್ಪರಗಿ ಸರ್ವೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ನಾಗನಗೌಡ ಪಾಟೀಲ, ಮುಖಂಡರುಗಳಾದ ಜಿ.ಕೆ. ಸಜ್ಜನ್, ಅಂಬಣ್ಣ ಆನೆಗುಂದಿ, ಸುರೇಶ ಸಜ್ಜನ, ಆರ್.ಎಸ್. ಬಿರಾದಾರ, ಶರಣು ತೊರವಿ, ಬಾಳಪ್ಪ ದೇವೂರ, ಭೋಗೇಶ ಜನಗೊಂಡ, ಭೀಮರಾಯ ಹಂಗನಳ್ಳಿ, ಧರ್ಮರಾಜ ಪಾಟೀಲ, ಅಮೀನಸಾಬ್ ಇನಾಮದಾರ, ಖಾದಿರ್ ಮೊಮೀನ, ಮೌನೇಶ್ ಬಡಿಗೇರ, ಶಿಕ್ಷಕರಾದ ವಿದ್ಯಾಧರ ಟಕ್ಕಳಕಿ ಸೇರಿದಂತೆ ಗ್ರಾಮದ ಪ್ರಮುಖರು, ಗಣ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 