ಜಾಗತಿಕ ಬಂಡವಾಳ ಹೂಡಿಕೆ ಯಶಸ್ವಿಗೆ ಎಂ.ಬಿ. ಪಾಟೀಲರ ಕಾರ್ಯ ಶ್ಲಾಘನೀಯ: ಡಾ.ಪ್ರಭುಗೌಡ

Global investment success MB. Patil's work is commendable: Dr.Prabhu Gowda

ದೇವರಹಿಪ್ಪರಗಿ 17: ಕರ್ನಾಟಕ ರಾಜ್ಯದ ಆರ್ಥಿಕ ಸುಸ್ಥಿರ ಬೆಳವಣಿಗೆಗೆ ಪೂರಕವಾದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನಲ್ಲಿ ಹಮ್ಮಿಕೊಂಡು ಅಭೂತ ಪೂರ್ವ ಯಶಸ್ವಿಗೊಳಿಸಿ ನೀರೀಕ್ಷೆಗೂ ಮೀರಿ ಸುಮಾರು 10.27 ಲಕ್ಷ ಕೋಟಿ ರೂ ಬಂಡವಾಳ ಹರಿದು ಬರುವಂತೆ ಮಾಡಿ ಅಭೂತ ಪೂರ್ವ ಯಶಸ್ವಿಗೊಳಿಸಿರುವ ರಾಜ್ಯ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಸಚಿವರು ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲರ ಕಾರ್ಯ ಶ್ಲಾಘನೀಯ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ದೇವರಹಿಪ್ಪರಗಿ ಮತಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿಗಳಾದ ಡಾ ಪ್ರಭುಗೌಡ ಲಿಂಗದಳ್ಳಿ (ಚಬನೂರ) ಹೇಳಿದರು. 

ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಯಶಸ್ವಿಯಾಗಿ ಆಯೋಜಿಸಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಸೇರಿದಂತೆ ಎಲ್ಲಾ ಸಚಿವರಿಗೆ ಅಭಿನಂದಿಸಿದರು. ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಹೆಚ್ಚಿನ ಅವಕಾಶಗಳಿವೆ, ಉದ್ಯಮಶೀಲತಾ ಕೌಶಲ್ಯ, ನುರಿತ ಮಾನವ ಸಂಪತ್ತು, ವಿಶ್ವ ದರ್ಜೆ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಉತ್ತರ ಕರ್ನಾಟಕ ಅದರಲ್ಲೂ ವಿಜಯಪುರ ಜಿಲ್ಲೆಯಲ್ಲಿ ಬಂಡವಾಳ ಹೂಡಿಕೆಗೆ ವಿಪುಲ ಅವಕಾಶಗಳಿವೆ. ಸಚಿವರಿಗೆ ಸಿಕ್ಕ ಅವಕಾಶವನ್ನು ಕರ್ನಾಟಕದ ಬಂಡವಾಳ ಸ್ನೇಹಿ ವಾತಾವರಣ ಏಕಗವಾಕ್ಷಿ ಪೋರ್ಟಲ್ ಮುಖಾಂತರ ಕೈಗಾರಿಕೆ ಸ್ಥಾಪನೆ ಸರಳೀಕರಣ ಗೊಳಿಸಿದ್ದನ್ನು ಮನವರಿಕೆ ಮಾಡಿಸಿ ಕರ್ನಾಟಕದಲ್ಲಿ ಬಂಡವಾಳ ಹೂಡುವಂತೆ ಮಾಡಿದ್ದಾರೆ. ಅಲ್ಲದೆ ಸುಮಾರು 75ಅ ಪ್ರತಿಶತದಷ್ಟು ಬಂಡವಾಳವನ್ನು ಬೆಂಗಳೂರನ್ನು ಹೊರತುಪಡಿಸಿ ಬೇರೆ ಬೇರೆ ಜಿಲ್ಲಾ ಕೇಂದ್ರಗಳಿಗೆ ಅದರಲ್ಲೂ ವಿಶೇಷವಾಗಿ ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕಕ್ಕೆ ಬರುವಂತೆ ಮಾಡಿರುವದು ಸುಮಾರು 6 ಲಕ್ಷದಷ್ಟು ಉದ್ಯೋಗ ಸೃಷ್ಟಿ ಮಾಡುತ್ತಿರುವುದು ನಿಜವಾಗಲೂ ಉತ್ತರ ಕರ್ನಾಟಕದ ನಿರುದ್ಯೋಗಿ ಯುವಕರ ಬಾಳಿಗೆ ಬೆಳಕಾಗಿದ್ದಾರೆ. ಸಚಿವರ ಕಾರ್ಯ ದಕ್ಷತೆಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರ ಜೊತೆ ಸಮನ್ವಯ ಸಾಧಿಸಿ ಹೂಡಿಕೆದಾರರ ಸಮಾವೇಶವದಲ್ಲಿ ಅವರ ಸಂಪೂರ್ಣ ಸಹಕಾರದಿಂದ ಜಾಗತಿಕ ಮಟ್ಟದ ಹೂಡಿಕೆದಾರರ ಸಮಾವೇಶ ಯಶಸ್ವಿಯಾಗಲು ಸಚಿವರಾದ ಎಂ.ಬಿ.ಪಾಟೀಲರ ಪಾತ್ರ ಬಹುದೊಡ್ಡದು.  

ಬರುವಂತ ದಿನಗಳಲ್ಲಿ ಕೈಗಾರಿಕಾ ಕಾರಿಡಾರ ಆಗುವಲ್ಲಿ ಯಾವುದೇ ಸಂಶಯವಿಲ್ಲ. ಮಹಾತ್ವಾಕಾಂಕ್ಷೆಯ ಕ್ವಿನ್ ಸಿಟಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಇದರಿಂದ ಉದ್ಯೋಗ ಸೃಷ್ಟಿಯಾಗಲಿದೆ. ಕಳೆದ ಬಾರಿ ಸರ್ಕಾರದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಹಾಗೂ ನೀರಾವರಿ ಸಚಿವರಾಗಿದ್ದಾಗ ಬರದ ಜಿಲ್ಲೆಯಾಗಿದ್ದ ವಿಜಯಪುರಕ್ಕೆ ಸಾವಿರಾರು ಕೋಟಿ ರೂ ತಂದು ನೀರಾವರಿ ಹಾಗೂ ಕೆರೆ ತುಂಬುವ ಯೋಜನೆಗಳನ್ನು ಜಾರಿಗೊಳಿಸಿ ಹಸಿರು ಕ್ರಾಂತಿ ಮಾಡಿದ ಕೀರ್ತಿ ಎಂ.ಬಿ. ಪಾಟೀಲರಿಗೆ ಸಲ್ಲುತ್ತದೆ. ಅಲ್ಲದೆ ರಾಜ್ಯಾದ್ಯಂತ ಸಮಗ್ರ ನೀರಾವರಿ ಯೋಜನೆಗಳನ್ನು ಜಾರಿಗೆ ತಂದು ಆಧುನಿಕ ಭಗೀರಥ ಎನಿಸಿಕೊಂಡಿದ್ದಾರೆ. ಈ ಬಾರಿ ಸರ್ಕಾರದಲ್ಲಿ ಬೃಹತ್ ಹಾಗೂ ಮಾಧ್ಯಮ ಕೈಗಾರಿಕೆ ಸಚಿವರಾಗಿ ಹತ್ತು ಹಲವು ದೇಶಗಳನ್ನು ಸುತ್ತಿ ಜಾಗತಿಕ ಬಂಡವಾಳ ಹೂಡಿಕೆದಾರರು. ಪ್ರಸಿದ್ಧ ಕಂಪನಿ ಮಾಲೀಕರನ್ನು ಭೇಟಿಯಾಗಿ ವಿಜಯಪುರ ಜಿಲ್ಲೆಗೆ 42 ಸಾವಿರ ಕೋಟಿ ಸೇರಿದಂತೆ 10.27 ಲಕ್ಷ ಕೋಟಿ ಹೂಡಿಕೆಗೆ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಕರ್ನಾಟಕದ ಬಂಡವಾಳ ಸ್ನೇಹಿ ವಾತಾವರಣ ಹಾಗೂ ಕೈಗಾರಿಕೆ ಸ್ಥಾಪನೆ ಸರಳೀಕರಣಗೊಳಿಸಿದ್ದನ್ನು ಮನವರಿಕೆ ಮಾಡಿಸಿ ಕರ್ನಾಟಕದಲ್ಲಿ ಬಂಡವಾಳ ಹೂಡುವಂತೆ ಮಾಡಿದ ಸಚಿವ ಡಾ.ಎಂ.ಬಿ. ಪಾಟೀಲರು ಕೈಗಾರಿಕಾ ಭೀಷ್ಮ ಆಗಿದ್ದಾರೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಪ.ಪಂ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.