ರಾಮನಗರ, ಆ 22 ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗುರುವಾರ ರಾಮನಗರದ ಜಾನಪದ ಲೋಕದಲ್ಲಿ ವಿಶ್ವ ಜಾನಪದ ದಿನಾಚರಣೆಯನ್ನು ವೈಭವದದಿಂದ ಆಚರಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಜಾನಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನಶಿಸುತ್ತಿರುವ ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿಯಾಗಿದೆ. ಜಾನಪದ ಪರಂಪರೆಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ನೀಡುವ ಅಗತ್ಯವಿದೆ. ಜಾನಪದ ಸಾಹಿತ್ಯಕ್ಕೆ ಡಿಜಿಟಲ್ ಸ್ಪರ್ಷ ನೀಡಬೇಕು ಎಂದರು.
ಅರುಣಾಚಲ ಪ್ರದೇಶ, ಸಿಕ್ಕಿಂ, ಮೇಘಾಲಯ, ತ್ರಿಪುರ, ಮಿಜೋರಾಂ, ನಾಗಲ್ಯಾಂಡ್ ರಾಜ್ಯಗಳ ಕಲಾವಿದರು ತಮ್ಮ ರಾಜ್ಯದ ವೈವಿದ್ಯಮಯ ಜಾನಪದ ಕಲೆಗಳನ್ನು ಪ್ರದರ್ದೇಸಿ ರಂಜಿಸಿದರು.
ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಡಾ.ಹಂಪ ನಾಗರಾಜಯ್ಯ, ಬೆಂಗಳೂರು ವಿವಿ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಬಿ.ಗಂಗಾಧರ, ಜಾನಪದ ಪರಿಷತ್ತಿನ ಅಧ್ಯಕ್ಷ ಟಿ.ತಿಮ್ಮನಗೌಡ ಜಾನಪದ ಸಂಸ್ಕೃತಿ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು.