ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗೋ ಗ್ರೀನ್ ಇನಿಶಿಯೇಟಿವ್ ಸೈಕಲ್ ಜಾಥಾ
Go Green Initiative Cycle Jatha as part of World Environment Day
ಲೋಕದರ್ಶನ ವರದಿ
ವಿಜಯಪುರ 11 : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದಿನಾಂಕ 05 ಜೂನ್ 2026 ರಂದು, ಸಿದ್ದೇಶ್ವರ ಸಂಸ್ಥೆಯ ಸಿದ್ಧಸಿರಿ ಕಾನೂನು ಮಹಾವಿದ್ಯಾಲಯ, ವಿಜಯಪುರ, ಕರ್ನಾಟಕ ರಾಜ್ಯ ಯುವ ರೆಡ್ ಕ್ರಾಸ್ ಸೊಸೈಟಿ, ರಾಷ್ಟ್ರೀಯ ಸೇವಾ ಯೋಜನೆ (ಓಖಖ) ಹಾಗೂ ಎಪಿಎಂಸಿ ಪೊಲೀಸ್ ಠಾಣೆ, ವಿಜಯಪುರ ಇವರ ಸಹಯೋಗದಲ್ಲಿ “ಗೋ ಗ್ರೀನ್ ಇನಿಶಿಯೇಟಿವ್” ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ವಿಜಯಪುರ ವಕೀಲರ ಸಂಘದ ಹಿರಿಯ ವಕೀಲರಾದ ಅಡ್ವೊಕೇಟ್ ಬಸವರಾಜ ಯದವಾಡ ಅವರು ಉದ್ಘಾಟಿಸಿದರು.
ಪರಿಸರ ಸಂರಕ್ಷಣೆಯ ಮಹತ್ವವನ್ನು ವಿವರಿಸಿದ ಅವರು, ಮಾಲಿನ್ಯ ರಹಿತ ಪರಿಸರ ನಿರ್ಮಾಣಕ್ಕಾಗಿ ಸೈಕಲ್ ಬಳಕೆಯನ್ನು ಹೆಚ್ಚಿಸುವಂತೆ ಹಾಗೂ ಯುವಜನತೆ ಪರಿಸರ ಜಾಗೃತಿಯಲ್ಲಿ ಮುಂಚೂಣಿಯಲ್ಲಿರಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಸಿದ್ಧಸಿರಿ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸುಷ್ಮಾ ಎಸ್. ದೇಸಾಯಿ ಅವರು ಮಾತನಾಡಿ, ವಿಶ್ವ ಪರಿಸರ ದಿನದ ಮಹತ್ವ ಹಾಗೂ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರವನ್ನು ವಿವರಿಸಿದರು.
ಸೈಕಲ್ ಜಾಥಾದಲ್ಲಿ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ, ಕರ್ನಾಟಕ ರಾಜ್ಯ ಯುವ ರೆಡ್ ಕ್ರಾಸ್ ಸೊಸೈಟಿಯ ಸ್ವಯಂಸೇವಕರು, ಎನ್‌ಎಸ್‌ಎಸ್ ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಜಾಥಾವು ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ, ಗಾಂಧಿ ಚೌಕ್, ಕೇಂದ್ರ ಬಸ್ ನಿಲ್ದಾಣ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಮಾರ್ಗವಾಗಿ ಸಂಚರಿಸಿ, ಸಿದ್ಧಸಿರಿ ಕಾನೂನು ಮಹಾವಿದ್ಯಾಲಯ, ಎಪಿಎಂಸಿ ಯಾರ್ಡ, ವಿಜಯಪುರದಲ್ಲಿ ಸಮಾಪ್ತಿಗೊಂಡಿತು. ಜಾಥಾ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ, ಮಾಲಿನ್ಯ ನಿಯಂತ್ರಣ, ಸೈಕಲ್ ಬಳಕೆಯ ಮಹತ್ವ, ವೃಕ್ಷಾರೋಪಣ ಹಾಗೂ ಸುಸ್ಥಿರ ಜೀವನ ಶೈಲಿಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
“ಹೆಚ್ಚು ಸೈಕಲ್ ಬಳಸಿ ಹಿ ಇಂಧನ ಉಳಿಸಿ ಹಿ ಮಾಲಿನ್ಯ ಕಡಿಮೆ ಮಾಡಿ ಹಿ ಪರಿಸರ ಕಾಪಾಡಿ” ಎಂಬ ಸಂದೇಶವನ್ನು ಜನರಿಗೆ ಸಾರಲಾಯಿತು. ಕಾರ್ಯಕ್ರಮದ ಯಶಸ್ವಿಗೆ ಟ್ರಾಫೀಕ್ ಪೋಲಿಸ ಗಾಂಧಿಚೌಕ ಠಾಣೆಯ ಅಧಿಕಾರಿಗಳು ಮತ್ತು, ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಅಗತ್ಯ ಸಹಕಾರ ನೀಡಿದರು. ಕಾರ್ಯಕ್ರಮವು ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 