ಗ್ರಾಮಾಭಿವೃದ್ಧಿ ಯೋಜನೆಯಿಂದ ಗೊಜಗಾ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ
ಬೆಳಗಾವಿ 24: ಕೆರೆಗಳಿಗೆ ರಾಜ ಮಹಾರಾಜರ ಕಾಲದಿಂದಲು ಸುಮಾರು ವರ್ಷಗಳ ಇತಿಹಾಸವಿದೆ, ಕೆರೆಗಳನ್ನು ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ, ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಸಮಾಜಿಕ ಕಳಕಳಿಯಿಂದ ಜನರಿಗೊಸ್ಕರವಾಗಿ ಇಂತಹ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ ಊರಿನವರು ಇದರ ಸದುಪಯೋಗ ಪಡೆದುಕೊಳ್ಳಬೇಕು, ಧಾರ್ಮಿಕ ಮತ್ತು ಸೌಹಾರ್ದಯುತ ಬಾಂಧವ್ಯ ಬೆಸೆದಿರುವ ಈ ಕೆರೆಯನ್ನು ಚೆನ್ನಾಗಿ ಇಟ್ಟುಕೊಳ್ಳಬೇಕಾಗಿದ್ದು ನಮ್ಮ ಕರ್ತವ್ಯ ಎಂದು ಹಿರಿಯ ವಕೀಲರು ಜನಜಾಗೃತಿ ವೇದಿಕೆ ಸದಸ್ಯರಾದ ಜಿ. ಆರ್ ಸೋನೆರ ತಿಳಿಸಿದರು. ತಾಲೂಕಿನ ಅಂಬೇವಾಡಿ ಗ್ರಾಮ ಪಂಚಾಯತ್ ಹಾಗೂ ಗೋಜಗಾ ಕೆರೆ ಅಭಿವೃದ್ಧಿ ಸಮಿತಿ ಇವರ ಸಭಾಗಿತ್ವದಲ್ಲಿ 2024- 25 ನೇ ಸಾಲಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಮ್ಮೂರು ನಮ್ಮ ಕೆರೆ ಯೋಜನೆ ಅಡಿಯಲ್ಲಿ ಪುನಶ್ಚೇತನ ಗೊಳಿಸಲು ಆಯ್ಕೆಯಾದ ಸರಕಾರಿ ಕೆರೆ ಹೂಳೆತ್ತುವ ಕಾಮಗಾರಿ ಭೂಮಿ ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು. ಯೋಜನೆಯ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಬೆಳಗಾವಿ ಜಿಲ್ಲೆಯ ಜಿಲ್ಲಾ ನಿರ್ದೇಶಕ ಸತೀಶ ನಾಯಕ್ ರವರು ಮಾತನಾಡಿ ಕರ್ನಾಟಕ ರಾಜ್ಯಾದ್ಯಂತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರ್ಥಿಕ ಸಹಕಾರದೊಂದಿಗೆ 820 ಕೆರೆಗಳನ್ನು ಪುನಶ್ಚೇತನ ಗೊಳಿಸಲಾಗಿದ್ದು ಪ್ರಸ್ತುತ ಆರ್ಥಿಕ ವರ್ಷದಲ್ಲಿ 1000 ಕೆರೆಗಳನ್ನು ಪುನಶ್ಚೇತನ ಗೊಳಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ ಎಂಬ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷ ಚೇತನ್ ಪಾಟೀಲ ಮಾತನಾಡಿ ಕೆರೆಯ ಕಾಮಗಾರಿಗೆ ಎಲ್ಲರೂ ಬೆಂಬಲಿಸುತ್ತೇವೆ ಎಂಬ ಉತ್ತಮ ಮಾತುಗಳನ್ನಾಡಿದರು. ಗ್ರಾಮ ಪಂಚಾಯತ್ ನಿಂದ ಕೆರೆ ಕಾಮಗಾರಿಗೆ ಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸಿ ಕೊಡುವುದಾಗಿ ತಿಳಿಸಿದರು. ಕೆರೆ ಸಮಿತಿ ಸರ್ವ ಸದಸ್ಯರು, ಗ್ರಾಮ ಪಂಚಾಯತಿ ಕಆಓ, ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಸರ್ವ ಸದಸ್ಯರು ಮತ್ತು ಊರಿನ ಗಣ್ಯರು. ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸ್ವಸಹಾಯ ಮತ್ತು ಪ್ರಗತಿಬಂಧು ಸಂಘದ ಎಲ್ಲ ಸದಸ್ಯರು ಸೇವಾ ಪ್ರತಿನಿಧಿಗಳು ಹಾಜರಿದರು. ಯೋಜನಾಧಿಕಾರಿ ನಾಗರಾಜ ಹದ್ಲಿ ನಿರೂಪಿಸಿದರು. ವಲಯದ ಮೇಲ್ವಿಚಾರಕಿ ಸಂಗೀತ ರವರು ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕ ನಾಗರಾಜ್ ವಂದಿಸಿದರು.