ಗೋಕಾಕ ಮಹಾಲಕ್ಷ್ಮಿ ಜಾತ್ರೆ: ಗಾಳಿಯಲ್ಲಿ ಗುಂಡು: ರಮೇಶ ಜಾರಕಿಹೊಳಿ ಪುತ್ರನ ವಿರುದ್ಧ ಪ್ರಕರಣ ದಾಖಲು
Gokaka Mahalakshmi Fair: Bullet in air: Case registered against son of Ramesh Jarakiholi
ಬೆಳಗಾವಿ 05: ಜಿಲ್ಲೆಯ ಗೋಕಾಕದ ಮಹಾಲಕ್ಷ್ಮಿ ಜಾತ್ರೆಯಲ್ಲಿ ಶನಿವಾರ ಶಾಸಕ ರಮೇಶ ಜಾರಕಿಹೊಳಿ ಅವರ ಪುತ್ರ ಸಂತೋಷ, ಜನಸಂದಣಿಯ ಮಧ್ಯೆಯೇ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ.
ದಶಕದ ಬಳಿಕ ಗೋಕಾಕದಲ್ಲಿ ಅದ್ಧೂರಿ ಜಾತ್ರೆ ನಡೆಯುತ್ತಿದ್ದು, ಜಾರಕಿಹೊಳಿ ಕುಟುಂಬದವರೇ ಮುಂದಾಳತ್ವ ವಹಿಸಿದ್ದಾರೆ. ಉತ್ಸವದ ಆರನೇ ದಿನವಾದ ಶನಿವಾರ ಸಂತೋಷ ಜಾರಕಿಹೊಳಿ ಕೂಡ ಭಂಡಾರದ ಓಕುಳಿಯಲ್ಲಿ ಪಾಲ್ಗೊಂಡರು. ಈ ವೇಳೆ ಬಂದೂಕು ಹಿಡಿದುಕೊಂಡು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದರು. ಸುತ್ತ ಸೇರಿದ್ದ ಅವರ ಬೆಂಬಲಿಗರೆಲ್ಲ ಮಹಾಲಕ್ಷ್ಮೀಗೆ ಜೈ ಎಂದು ಕೂಗಾಡಿ, ಕುಣಿದಾಡಿ ಸಂಭ್ರಮಿಸಿದರು. ಇದರ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು.
ಅವರ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಶಸ್ತ್ರಾಸ್ತ್ರ ಪ್ರದರ್ಶನ ಹಾಗೂ ಗಾಳಿಯಲ್ಲಿ ಗುಂಡು ಹಾರಿಸಿದ ಅಪರಾಧ ಆಧರಿಸಿ ಪ್ರಕರಣ ದಾಖಲಿಸಲಾಗಿದೆ ಎಂದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 