ಚಕ್ರ ಎಸೆತದಲ್ಲಿ ಅವಿನಾಶ್ಗೆ ಚಿನ್ನ
Gold for Avinash in discus throw
ದೇವರಹಿಪ್ಪರಗಿ 19: ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಪುದುಚೇರಿಯಲ್ಲಿ ನಡೆದ 37ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ ಚಕ್ರ ಎಸೆತ ಸ್ಪರ್ಧೆಯಲ್ಲಿ ದೇವರಹಿಪ್ಪರಗಿ ಸಿದ್ದೇಶ್ವರ ಸ್ವಾಮೀಜಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅವಿನಾಶ್ ಮಲ್ಲಿಕಾರ್ಜುನ ತಳಕೇರಿ ಚಿನ್ನದ ಪದಕ ಗೆದ್ದಿದ್ದಾರೆ. ಚಕ್ರವನ್ನು 51.02 ಮೀಟರ್ ದೂರ ಎಸೆಯುವ ಮೂಲಕ ಪ್ರಥಮ ಸ್ಥಾನ ಪಡೆದ ಅವಿನಾಶ್, ಈ ಸಾಧನೆಯೊಂದಿಗೆ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸತತ ಮೂರನೇ ಬಾರಿಗೆ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಅವಿನಾಶ್, ಕಠಿಣ ತರಬೇತಿ ಹಾಗೂ ನಿರಂತರ ಪರಿಶ್ರಮದಿಂದ ಈ ಸಾಧನೆ ಮಾಡಿದ್ದಾರೆ. ವಿಜಯಪುರ ಜಿಲ್ಲೆಯ ಪರವಾಗಿ ಸತತ ಏಳನೇ ಬಾರಿಗೆ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ವಿಶೇಷವಾಗಿದೆ. ಅವಿನಾಶ್ ಅವರ ಸಾಧನೆಗೆ ಕಾಲೇಜಿನ ಅಧ್ಯಕ್ಷ ವಿ.ಕೆ. ಪಾಟೀಲ, ತರಬೇತುದಾರರಾದ ಹಾಜಿಲಾಲ್ ಮಕಾಂದರ್, ರಾಜು ಕಾಖಂಡಕಿ ಸೇರಿದಂತೆ ಗಣ್ಯರು ಹಾಗೂ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಜಿಲ್ಲೆ ಹಾಗೂ ರಾಜ್ಯಕ್ಕೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 