ರಾಜ್ಯಮಟ್ಟದ ಚಕ್ರ ಎಸೆತ ಸ್ಪರ್ಧೆಯಲ್ಲಿ ಅವಿನಾಶ್ಗೆ ಚಿನ್ನದ ಪದಕ
Gold medal for Avinash in state-level discus throw competition
ದೇವರ ಹಿಪ್ಪರಗಿ 13 : ಕರ್ನಾಟಕ ರಾಜ್ಯದಲ್ಲಿ ನಡೆದ 2026ಹಿ27 ಸಾಲಿನ 20 ವರ್ಷ ವಯೋಮಿತಿಯೊಳಗಿನ ಮಕ್ಕಳ ರಾಜ್ಯಮಟ್ಟದ ಅಮೆಚೂರ್ ಕ್ರೀಡಾಕೂಟದಲ್ಲಿ ದೇವರ ಹಿಪ್ಪರಗಿ ಪಟ್ಟಣದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಅವಿನಾಶ್ ಮಲ್ಲಿಕಾರ್ಜುನ ತಳಕೆರಿ ಅವರು ಚಕ್ರ ಎಸೆತ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಚಕ್ರವನ್ನು 50.63 ಮೀಟರ್ ದೂರ ಎಸೆದು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿರುವ ಅವಿನಾಶ್, ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ನಿರಂತರ ಪರಿಶ್ರಮ, ಕಠಿಣ ತರಬೇತಿ ಹಾಗೂ ಕ್ರೀಡಾ ಪ್ರತಿಭೆಯ ಮೂಲಕ ಅವರು ಈ ಗಮನಾರ್ಹ ಸಾಧನೆ ಮಾಡಿದ್ದಾರೆ. ಶಿಕ್ಷಕರ ಪುತ್ರರಾಗಿರುವ ಅವಿನಾಶ್ ತಳಕೆರಿ ಅವರು ವಿಜಯಪುರ ಜಿಲ್ಲೆಯ ಪರವಾಗಿ ಸತತ ಏಳನೇ ಬಾರಿ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ವಿಶೇಷವಾಗಿದೆ. ಈ ಮೂಲಕ ವಿಜಯಪುರ ಜಿಲ್ಲೆ ಹಾಗೂ ದೇವರ ಹಿಪ್ಪರಗಿ ತಾಲ್ಲೂಕಿನ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಹೆಚ್ಚಿಸಿದ್ದಾರೆ.
ಅವಿನಾಶ್ ಅವರ ಸಾಧನೆಗೆ ಸಿದ್ದೇಶ್ವರ ಸ್ವಾಮೀಜಿ ಪದವಿ ಪೂರ್ವ ಕಾಲೇಜಿನ ಸಂಸ್ಥೆಯ ಅಧ್ಯಕ್ಷರಾದ ವಿ.ಕೆ. ಪಾಟೀಲ, ತರಬೇತುದಾರರಾದ ಹಾಜೀಲಾಲ್ ಮಕಾಂದರ್, ರಾಜು ಕಾಖಂಡಕಿ ಸೇರಿದಂತೆ ತಾಲ್ಲೂಕಿನ ಗಣ್ಯರು ಹಾಗೂ ಕ್ರೀಡಾಭಿಮಾನಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅವಿನಾಶ್ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಹಾಗೂ ರಾಷ್ಟ್ರಮಟ್ಟದಲ್ಲಿಯೂ ಜಿಲ್ಲೆ ಮತ್ತು ರಾಜ್ಯಕ್ಕೆ ಕೀರ್ತಿ ತರಲಿ ಎಂದು ಹಾರೈಸಿದ್ದಾರೆ.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 