ದಾವಲಸಾಬ ನರಗುಂದ ಅವರಿಗೆ ಚಿನ್ನದ ಪದಕ

ಗದಗ 27 : ಜಿಲ್ಲೆಯ ಮುಳಗುಂದ ಪಟ್ಟಣದ ಮೀರಾಸಾಬ (ಅಮಜಾದ) ನರಗುಂದ ಮತ್ತು ಬೀಬಿಜಾನ ನರಗುಂದ ದಂಪತಿಗಳ ಮಗನಾದ ದಾವಲಸಾಬ ನರಗುಂದ ಅವರು ಕರ್ನಾಟಕ ವಿಶ್ವವಿದ್ಯಾಲಯದ ಡಾ.ಆರ್‌.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕರಾದ ಡಾ.ನಿಂಗಪ್ಪ ಎನ್‌.ಹಳ್ಳಿ ಇವರ ಮಾರ್ಗದರ್ಶನದಲ್ಲಿ “ಕಡಕೋಳ ಮಡಿವಾಳಪ್ಪ ಮತ್ತು ಶಿಶುನಾಳ ಶರೀಫರು : ತೌಲನಿಕ ಅಧ್ಯಯನ'' ಎಂಬ ವಿಷಯ ಕುರಿತು ಸಂಶೋಧನಾ ಮಹಾಪ್ರಬಂಧವನ್ನು ಸಲ್ಲಿಸಿರುತ್ತಾರೆ. ಇವರಿಗೆ ಕರ್ನಾಟಕ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು 74ನೇ ವಾರ್ಷಿಕ ಘಟಿಕೋತ್ಸವದಲ್ಲಿ ಕರ್ನಾಟಕ ಸರ್ಕಾರ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ ಅವರು  ಪ್ರದಾನ ಮಾಡಿದರು. 

ಈ ಕಾರ್ಯಕ್ರಮದಲ್ಲಿ ಕ.ವಿ.ವಿಯ ಕುಲಪತಿಗಳಾದ ಪ್ರೊ.ಕೆ.ಬಿ.ಗುಡಸಿ, ಕುಲಸಚಿವರಾದ ಡಾ.ಎ.ಚನ್ನಪ್ಪ, ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎನ್‌.ವೈ.ಮಟ್ಟಿಹಾಳ ಹಾಗೂ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಇವರಿಗೆ ಕುಟುಂಬದವರು, ಊರಿನ ಗುರು- ಹಿರಿಯರು, ಶಿಕ್ಷಕರು, ಗೆಳೆಯರು, ಸಂಘ ಸಂಸ್ಥೆಯವರು ಅಭಿನಂದಿಸಿದ್ದಾರೆ.