ಉಪನ್ಯಾಸಕಿ ಡಾ. ಪ್ರತಿಭಾ ಭಟ್‌ಗೆ ಗೋಲ್ಡ್ ಮೆಡಲ್
Gold medal for Lecturer Dr. Pratibha Bhatt
ಕಾರವಾರ 13: ಕರ್ಣಾಟಕ ರಾಜ್ಯ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಇವರ ಸಹಯೋಗದಲ್ಲಿ ಕೆಪಿಟಿಸಿ ಎಂಪ್ಲಾಯೀಸ್ ಸಭಾಭವನ ಮಂಗಳೂರಿನಲ್ಲಿ ಜು. 12 ರಂದು ನಡೆದ ರಾಜ್ಯ ಮಟ್ಟದ ಮಹಿಳಾ ಮತ್ತು ಪುರುಷರ ಮಾಸ್ಟರ್ಸ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕುಮಟಾದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ಡಾ. ಪ್ರತಿಭಾ ಭಟ್ ಇವರು ಮಾಸ್ಟರ್ಸ್ ಒನ್ ಮಹಿಳೆಯರ, 63 ಕೆ.ಜಿ. ದೇಹ ತೂಕ ವಿಭಾಗದಲ್ಲಿ ಭಾಗವಹಿಸಿ ಬಂಗಾರದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇವರು ಕುಮಟಾದ ಪ್ರಭು ಫಿಟ್ನೆಸ್ ಸೆಂಟರ್ ನಲ್ಲಿ ವೆಂಕಟೇಶ್ ಪ್ರಭು ಇವರಿಂದ ತರಬೇತಿಯನ್ನು ಪಡೆದುಕೊಂಡಿರುತ್ತಾರೆ. ಇವರು ಮಾಸ್ಟರ್ಸ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬಂಗಾರದ ಪದಕವನ್ನು ಪಡೆದ ಉತ್ತರ ಕನ್ನಡದ ್ರ್ರಥಮ ಮಹಿಳೆಯಾಗಿದ್ದಾರೆ. ಆಗಸ್ಟ್ 2-7 ರ ವರೆಗೆ ಜರುಗುವ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.ಇವರ ಈ ಸಾಧನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಜಯಾ ಡಿ.ನಾಯ್ಕ ಹಾಗೂ ಬೋಧಕ, ಬೋಧಕೆತರ ವೃಂದ ವಿದ್ಯಾರ್ಥಿಗಳು ಮತ್ತು ಪ್ರಭು ಫಿಟ್ನೆಸ ನ ಸದಸ್ಯರು ಅಭಿನಂದಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 