ಶ್ವೇತಾ ಶಿವಪುತ್ರ್ಪ ಕಕ್ಕಿಹಳ್ಳಿ ಅವರಿಗೆ ಚಿನ್ನದ ಪದಕ
Gold medal for Shweta Shivaputra Kakkihalli
ಕೊಪ್ಪಳ 22 : ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಶ್ವೇತಾ ಶಿವಪುತ್ರ್ಪ ಕಕ್ಕಿಹಳ್ಳಿ ಅವರು ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯ ವಿಜಯಪುರದ ಪದವಿ ವಿಜ್ಞಾನ ವಿಭಾಗದ ಭೌತಶಾಸ್ತ್ರ ವಿಷಯದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿನಿಯರಿಗೆ ಪ್ರೊ. ರತ್ನ ನಾಯ್ಕ ಮತ್ತು ವಾಮನ ನಾಯ್ಕ ಹೆಸರಲ್ಲಿ ನೀಡುವ ಚಿನ್ನದ ಪದಕವನ್ನು ಮಂಗಳವಾರದಂದು ವಿಜಯಪುರ ವಿಶ್ವ ವಿದ್ಯಾನಿಲಯದಲ್ಲಿ ನಡೆದ 2024-25 ಸಾಲಿನ ವಾರ್ಷಿಕ ಘಟಿಕೋತ್ಸದಲ್ಲಿ ಸ್ವೀಕರಿಸಿದ್ದಾರೆ.
ಬಿಎಸ್ಸಿ ಅಂತಿಮ ವರ್ಷದ ಪದವಿಯಲ್ಲಿ 95ಅ ಮಾಡಿದ್ದಾರೆ. ಇವರದು ಮೂಲತಃ ಯಲಬುರ್ಗಾ ತಾಲೂಕಿನ ಗದ್ದಿಗೆರೆ ತಾಂಡ. ಇವರ ತಂದೆ ಶಿವಪುತ್ರ್ಪ ಮತ್ತು ತಾಯಿ ಮಂಜುಳಾ ಇಬ್ಬರು ಕುರಿ ಕಾಯುತ್ತಿದ್ದಾರೆ. ಬಹಳ ಬಡತನ ಕುಟುಂಬ. ಇವರ ಶೈಕ್ಷಣಿಕ ಜೀವನ ಇನ್ನಷ್ಟು ಉಜ್ವಲವಾಗಲಿವೆಂದು ಇವರಿಗೆ ಕಾಲೇಜಿನ ಪ್ರಾಚಾರ್ಯರು, ಭೋಧಕ ಮತ್ತು ಭೋಧಕೇತರ ಸಿಬ್ಬಂದಿಗಳು, ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಅಭಿನಂದನೆಗಳು ಸಲ್ಲಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 