ವಿಶಾಲ್ ರಾಥೋಡ್ಗೆ ರಾಜ್ಯಮಟ್ಟದ ಅಥ್ಲೆಟಿಕ್ ಮೀಟ್ನಲ್ಲಿ ಚಿನ್ನದ ಪದಕ
Gold medal for Vishal Rathod at the state-level athletic meet
ಬೆಳಗಾವಿ 18: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಗಸ್ಟ್ 11 ಮತ್ತು 12ರಂದು ನಡೆದ ಕರ್ನಾಟಕ ರಾಜ್ಯಮಟ್ಟದ ಜೂನಿಯರ್ ಅಥ್ಲೆಟಿಕ್ ಮೀಟ್ನಲ್ಲಿ ಕೆಎಲ್‌ಇ ಸಂಸ್ಥೆಯ ಜಿ.ಎ. ಹೈಸ್ಕೂಲ್ ವಿದ್ಯಾರ್ಥಿ ಕುಮಾರ್ ವಿಶಾಲ್ ಗುರುನಾಥ ರಾಥೋಡ್ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಜಾವೆಲಿನ್ ಎಸೆತದಲ್ಲಿ 54.40 ಮೀಟರ್ ದೂರ ಎಸೆದು ಪ್ರಥಮ ಸ್ಥಾನ ಪಡೆದುಕೊಂಡಿರುವ ವಿಶಾಲ್ ರಾಥೋಡ್, ಚಿನ್ನದ ಪದಕದೊಂದಿಗೆ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಸಾಧನೆಯ ಮೂಲಕ ಅವರು ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿಶಾಲ್ ಅವರ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯ ಸರ್ವ ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರಾದ ಸಿ.ಪಿ. ದೇವಋಷಿ, ದೈಹಿಕ ಶಿಕ್ಷಣ ಶಿಕ್ಷಕರಾದ ಎಸ್.ಜಿ. ವೀರಗಂಟಿ ಹಾಗೂ ಶಾಲೆಯ ಶಿಕ್ಷಕ-ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 