ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ

Gold smuggling case: Actress Ranya Rao's bail plea dismissed

ಬೆಂಗಳೂರು 14: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ನ್ಯಾಯಾಲಯ, ಇಂದು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಮಾರ್ಚ್​ 3ರ ರಾತ್ರಿ ದುಬೈನಿಂದ ಎಮಿರೇಟ್ಸ್ ಏರ್‌ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದು, ಈ ವೇಳೆ ನಟಿ ಬಳಿ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ತಕ್ಷಣ ನಟಿಯನ್ನು ಬಂಧಿಸಲಾಗಿತ್ತು.